ರೌಡಿ ಶೀಟರ್‌ಗಳ ಮೇಲೆ ಗುಂಡಿನ ದಾಳಿ

ಬುಧವಾರ, ಮೇ 22, 2019
29 °C

ರೌಡಿ ಶೀಟರ್‌ಗಳ ಮೇಲೆ ಗುಂಡಿನ ದಾಳಿ

Published:
Updated:
ರೌಡಿ ಶೀಟರ್‌ಗಳ ಮೇಲೆ ಗುಂಡಿನ ದಾಳಿ

ಕಲಬುರ್ಗಿ: ರೌಡಿ ಶೀಟರ್‌ಗಳಾದ ಶಿವಕುಮಾರ್ ಮತ್ತು ಚೇತನ್‌ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಇಬ್ಬರಿಗೂ ಇಲ್ಲಿನ ಯುನೈಟೆಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಿಬ್ಬರನ್ನೂ ಬಂಧಿಸಲು ತೆರಳಿದ್ದ ಆರ್‌.ಜಿ. ನಗರ ಠಾಣೆ ಪಿಎಸ್‌ಐ ಅಕ್ಕಮಹಾದೇವಿ ಹಾಗೂ ಅಶೋಕನಗರ ಠಾಣೆ ಇನ್‌ಸ್ಪೆಕ್ಟರ್ ಜೇಮ್ಸ್ ಮಿನೇಜಸ್ ಅವರಿಗೆ ಗಾಯಗಳಾಗಿವೆ. ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅ.2ರಂದು ಶಿವಕುಮಾರ್ ಹಾಗೂ ಚೇತನ್ ಅವರು ಪ್ರವೀಣ ಮತ್ತು ವಿನಾಯಕ್ ಎಂಬುವರನ್ನು ಬೆದರಿಸಿ ಹಣ, ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದರು. ಖಚಿತ ಮಾಹಿತಿ ಆಧರಿಸಿ ಇಲ್ಲಿನ ಆಳಂದ ರಸ್ತೆಯ ಡಬರಾಬಾದ್ ಬಳಿ ಅವರಿಬ್ಬರನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಗಳು ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಪೊಲೀಸರು ರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಈಶಾನ್ಯ ವಲಯ ಐಜಿಪಿ ಅಲೋಕ್‌ ಕುಮಾರ್‌, ಎಸ್ಪಿ ಎನ್. ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry