ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮ

ಶುಕ್ರವಾರ, ಮೇ 24, 2019
23 °C

ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮ

Published:
Updated:
ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮ

ಹುಬ್ಬಳ್ಳಿ: ‘ಅವಳಿ ನಗರದಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಂಚಾರ ದಟ್ಟಣೆ ತಡೆಗಟ್ಟುವ ನಿಟ್ಟಿನಲ್ಲಿ ಎಚ್‌–ಡಿ ಟ್ರ್ಯಾಕ್‌ ಯೋಜನೆಯಡಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲಾಗುವುದು’ ಎಂದು ಗೃಹ ಸಚಿವ ಆರ್‌. ರಾಮಲಿಂಗಾರೆಡ್ಡಿ ತಿಳಿಸಿದರು.

‘ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕಾಲೇಜುಗಳ ಬಳಿ ಕಡ್ಡಾಯವಾಗಿ ಗಸ್ತು ತಿರುಗುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಹುಡುಗಿರನ್ನು ಭೇಟಿಯಾಗಿ ಕುಂದು ಕೊರತೆ ವಿಚಾರಿಸುವಂತೆ ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಲಾಗಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಹಳೇ ಹುಬ್ಬಳ್ಳಿಯ ಆನಂದನಗರ, ಧಾರವಾಡದ ಸತ್ತೂರ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಹೊಸದಾಗಿ ಮೂರು ಠಾಣೆಗಳನ್ನು ಆರಂಭಿಸಲು ಪ್ರಸ್ತಾವ ಸಲ್ಲಿಸಲಾಗಿದ್ದು, ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಹೇಳಿದರು.

‘ಆಯಕಟ್ಟಿನ ಸ್ಥಳಗಳಲ್ಲಿ ಜಿಲ್ಲಾಡಳಿತ ಮತ್ತು ಪಾಲಿಕೆ ಸಹಕಾರದೊಂದಿಗೆ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗುವುದು. ಪ್ರಮುಖ ಸ್ಥಳಗಳಲ್ಲಿ ಆಟೊ ನಿಲ್ದಾಣಕ್ಕೆ ಅವಕಾಶ ಮಾಡಿಕೊಡುವಂತೆ ಚಾಲಕರು ಕೋರಿದ್ದಾರೆ. ಪಾಲಿಕೆ ಸ್ಥಳ ನೀಡಿದರೆ ನಿಲ್ದಾಣಕ್ಕೆ ಅವಕಾಶ ನೀಡಲಾಗುವುದು’ ಎಂದು ಹೇಳಿದರು.

‘ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅನೇಕ ಬು‌ಕ್ಕಿಗಳನ್ನು ಬಂಧಿಸಲಾಗಿತ್ತು. ಸಿಐಡಿ ತಂಡ ತನಿಖೆ ನಡೆಸುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಎಡಿಜಿಪಿ (ಕಾನೂನು–ಸುವ್ಯವಸ್ಥೆ) ಅಲೋಕ್‌ ಮೋಹನ್‌, ಪೊಲೀಸ್‌ ಕಮಿಷನರ್‌ ಎಂ.ಎನ್‌. ನಾಗರಾಜ, ಡಿಸಿಪಿ (ಅಪರಾಧ–ಸಂಚಾರ) ಬಿ.ಎಸ್‌. ನೇಮಗೌಡ ಇದ್ದರು.

ಪ್ರಗತಿ ಪರಿಶೀಲನೆ ಅವಳಿ ನಗರದಲ್ಲಿ ನಡೆದಿರುವ ಅಪರಾಧ ಕೃತ್ಯಗಳು, ಕೊಲೆ, ದರೋಡೆ ಹಾಗೂ ಇಲಾಖೆಯ ಪ್ರಗತಿ ಕುರಿತು ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry