ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎ ಅವಧಿಯಲ್ಲಿ ಆರೋಗ್ಯ ಸೇವೆಗಳು ಕುಂಠಿತ: ಪ್ರಧಾನಿ ಮೋದಿ

Last Updated 8 ಅಕ್ಟೋಬರ್ 2017, 12:56 IST
ಅಕ್ಷರ ಗಾತ್ರ

ವಡ್ನೆಗರ್‌: ’ದೇಶದಲ್ಲಿ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಯುಪಿಯ ಸರ್ಕಾರ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಟೀಕಿಸಿದರು.

ಎರಡು ದಿನಗಳ ಗುಜರಾತ್ ಪ್ರವಾಸದ ವೇಳೆ ತಮ್ಮ ಹುಟ್ಟೂರಾದ ವಡ್ನೆಗರ್‌ಗೆ ಭೇಟಿ ನೀಡಿದ ಮೋದಿ, ಇಲ್ಲಿನ ವೈದ್ಯಕೀಯ ಕಾಲೇಜನ್ನು ಉದ್ಘಾಟಿಸಿದ ಬಳಿಕ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಯುಪಿಎ ಸರ್ಕಾರ ಯಾವುದೇ ಕೆಲಸವನ್ನು ಮಾಡಲಿಲ್ಲ,  ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೆ ತಂದಿದ್ದ ಆರೋಗ್ಯ ನೀತಿಯನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ಯುಪಿಎ ಸರ್ಕಾರ ವಿಫಲವಾಗಿತ್ತು ಎಂದರು. ಈ ಅವಧಿಯಲ್ಲಿ ದೇಶದಲ್ಲಿ ಆರೋಗ್ಯ ಯೋಜನೆಗಳು ಕುಂಠಿತವಾಗಿದ್ದವು ಎಂದು ಟೀಕಿಸಿದರು.

ಯುವ ವೈದ್ಯರು ಆರೋಗ್ಯ ಸೇವೆ ನೀಡುವಲ್ಲಿ ಮುಂದೆ ಬರಬೇಕು ಎಂದು ಕಿವಿ ಮಾತು ಹೇಳಿದರು. ಸಾರ್ವಜನಿಕರು ಸಹ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಸ್ವಚ್ಛತೆ ಬಗ್ಗೆ ಗಮನ ನೀಡುವಂತೆ ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT