ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕೂಟಕ್ಕೆ ಅಪಾಯ?

Last Updated 8 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಐಟಿ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳ ಮೂಲಕ ದಾಳಿ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. ಇದು ಏಳು ದಶಕಗಳಿಂದ ಪಾಲಿಸಿಕೊಂಡು ಬಂದಿರುವ ಒಕ್ಕೂಟ ವ್ಯವಸ್ಥೆಗೆ ಅಪಾಯ ಒದಗುತ್ತಿರುವುದರ ಮುನ್ಸೂಚನೆ ಎನ್ನಬಹುದು.

ಕಾನೂನಾತ್ಮಕವಾಗಿ ಇಂಥ ದಾಳಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆಯೇ ಎನ್ನುವುದರ ಬಗ್ಗೆ ಕಾನೂನು ಪಂಡಿತರು ಜಿಜ್ಞಾಸೆಯಲ್ಲಿದ್ದಾರೆ. ಆದಾಯ ತೆರಿಗೆ ಇಲಾಖೆ ಕರ್ನಾಟಕದಲ್ಲಿ ಇತ್ತೀಚೆಗೆ ನಡೆಸಿದ ದಾಳಿಯಲ್ಲಿ ಪಕ್ಷ ರಾಜಕೀಯದ ವಾಸನೆಯನ್ನು ಆಘ್ರಾಣಿಸಿದ ರಾಜ್ಯ ಸರ್ಕಾರ ಇಂಥ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ವಿರೋಧಿಗಳನ್ನು ಮಟ್ಟಹಾಕಲು ಮತ್ತು ಅವರನ್ನು ತಮ್ಮ ದಾರಿಗೆ ತರಲು ತಮ್ಮ ಆಧೀನದಲ್ಲಿ ಇರುವ  ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತವೆ ಎನ್ನುವ ಅರೋಪ ಲಾಗಾಯ್ತಿನಿಂದ ಇದೆ.

ಈ ನಿಟ್ಟಿನಲ್ಲಿ ಇತ್ತೀಚಿನ ಬೆಳವಣಿಗೆ  ಕೇಂದ್ರ ಮತ್ತು ರಾಜ್ಯಗಳ ಸಂಬಂಧವನ್ನು ಕೆಡಿಸುತ್ತಿದೆ. ಸರ್ಕಾರಗಳು ತಮ್ಮ ಸುಪರ್ದಿಯಲ್ಲಿರುವ ತನಿಖಾ ಸಂಸ್ಥೆಗಳನ್ನು ಸ್ವಾರ್ಥ ಸಾಧನೆಗಾಗಿ ಬಳಸುವುದನ್ನು ಬಿಟ್ಟರೆ ಇಂಥ ಸಮಸ್ಯೆಗಳು ಉದ್ಭವಿಸಲಾರವು.
-ರಮಾನಂದ ಶರ್ಮಾ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT