ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ಮಲ್ಲಿಕಾ ಘಂಟಿ ವಿರುದ್ಧ ವಾರಂಟ್‌ ಜಾರಿ

Last Updated 8 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಭದ್ರಾವತಿ: ಪ್ರಕರಣವೊಂದರ ಸಾಕ್ಷಿ ವಿಚಾರಣೆಗೆ ಗೈರುಹಾಜರಾದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಮಲ್ಲಿಕಾ ಎಸ್. ಘಂಟಿ ವಿರುದ್ಧ ಇಲ್ಲಿನ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಜಾಮೀನು ಸಹಿತ ವಾರಂಟ್ ಜಾರಿಗೊಳಿಸಿದೆ.

ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ವೇಳೆ ಅವರು ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಶನಿವಾರ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷಿ ಹೇಳದೇ ಇರುವುದರಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ಹಿನ್ನೆಲೆ: ವಿಶ್ವವಿದ್ಯಾಲಯದ ಕೆಲವು ಸಿಬ್ಬಂದಿ ತಮ್ಮ ಕೊಲೆಗೆ ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ಮಲ್ಲಿಕಾ ಘಂಟಿ ಇಲ್ಲಿನ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು.

ಇದೇ ಪ್ರಕರಣದ ಆರೋಪಿಯಾಗಿದ್ದ ಅಂದಿನ ಪರೀಕ್ಷಾಂಗ ಕುಲಸಚಿವ ಪ್ರೊ. ಬೋಜಾ ನಾಯ್ಕ ಅವರ ವಿಚಾರಣೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ, ಉಳಿದ ಮೂವರ ವಿರುದ್ಧದ ಆರೋಪದ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT