ಆಂಧ್ರ, ತಮಿಳುನಾಡು ಚಾಂಪಿಯನ್‌

ಗುರುವಾರ , ಜೂನ್ 20, 2019
24 °C

ಆಂಧ್ರ, ತಮಿಳುನಾಡು ಚಾಂಪಿಯನ್‌

Published:
Updated:
ಆಂಧ್ರ, ತಮಿಳುನಾಡು ಚಾಂಪಿಯನ್‌

ಶಿಕಾರಿಪುರ: ‘ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಏಕಲವ್ಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 19 ವರ್ಷದೊಳಗಿನವರ ರಾಷ್ಟ್ರಮಟ್ಟದ ಬಾಲ್‌ ಬ್ಯಾಡ್ಮಿಂಟನ್‌ ಟೂರ್ನಿಯ ಪುರುಷರ ವಿಭಾಗದಲ್ಲಿ ಆಂಧ್ರಪ್ರದೇಶ ಹಾಗೂ ಮಹಿಳೆಯರ ವಿಭಾಗದಲ್ಲಿ ತಮಿಳುನಾಡು ತಂಡಗಳು ಚಾಂಪಿಯನ್‌ ಆದವು.

ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನ ತಮಿಳುನಾಡು, ತೃತೀಯ ಕರ್ನಾಟಕ ಮತ್ತು ನಾಲ್ಕನೇ ಸ್ಥಾನ ಕೇರಳದ ಪಾಲಾಯಿತು. ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಕರ್ನಾಟಕ, ತೃತೀಯ ಸ್ಥಾನ ಆಂಧ್ರಪ್ರದೇಶ, ನಾಲ್ಕನೇ ಸ್ಥಾನ ಕೇರಳದ ಪಾಲಾಯಿತು.

ಪುರುಷರ ಡಬಲ್ಸ್‌ ವಿಭಾಗದಲ್ಲಿ ತಮಿಳುನಾಡು ಪ್ರಶಸ್ತಿ ಎತ್ತಿ ಹಿಡಿಯಿತು. ಆಂಧ್ರಪ್ರದೇಶ ದ್ವಿತೀಯ ಸ್ಥಾನ ಗಳಿಸಿತು. ಮಹಿಳೆಯರ ವಿಭಾಗದ ಪ್ರಶಸ್ತಿ ತಮಿಳುನಾಡು ಗಳಿಸಿದರೆ ಕರ್ನಾಟಕ ರನ್ನರ್ ಅಪ್‌ ಆಯಿತು. ಮಿಶ್ರ ಡಬಲ್ಸ್‌ನಲ್ಲಿ ತಮಿಳುನಾಡು ಮತ್ತು ಕರ್ನಾಟಕ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry