ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಹಿತಿ ನೀಡಿದರೆ ₹10 ಲಕ್ಷ ಬಹುಮಾನ: ಸಿಬಿಐ

Last Updated 8 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ, ಕಾಣೆಯಾದ ವಿದ್ಯಾರ್ಥಿ ನಜೀಬ್‌ ಅಹ್ಮದ್‌ ಕುರಿತು ಮಾಹಿತಿ ನೀಡುವವರಿಗೆ ₹10 ಲಕ್ಷ ಬಹುಮಾನ ನೀಡುವುದಾಗಿ ಕೇಂದ್ರ ತನಿಖಾ ದಳ (ಸಿಬಿಐ) ಘೋಷಿಸಿದೆ.

2016ರ ಅಕ್ಟೋಬರ್‌ 14ರ ರಾತ್ರಿ ನಜೀಬ್‌ ಕಾಣೆಯಾಗಿದ್ದರು. ದೆಹಲಿ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಹೇಳಿದ ದೆಹಲಿ ಹೈಕೋರ್ಟ್‌, ಇದೇ ಜೂನ್‌ 2 ರಂದು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ, ‘ನಜೀಬ್‌ ಬಗ್ಗೆ ಮಾಹಿತಿ ನೀಡುವವರಿಗೆ ನಗದು ಬಹುಮಾನ ನೀಡಲಾಗುವುದು. ಮಾಹಿತಿದಾರರ ಹೆಸರು ಹಾಗೂ ವಿವರವನ್ನು ರಹಸ್ಯವಾಗಿ ಇಡಲಾಗುವುದು’ ಎಂದು ಸಿಬಿಐ ತಿಳಿಸಿದೆ.

ನಜೀಬ್ ಬಗ್ಗೆ ಮಾಹಿತಿ ನೀಡುವವರು ದೆಹಲಿಯ ಲೋಧಿ ರಸ್ತೆಯ ಸಿಜಿಒ ಕಾಂಪ್ಲೆಕ್ಸ್‌ನಲ್ಲಿರುವ ಸಿಬಿಐ ಕಚೇರಿಯನ್ನು ಸಂಪರ್ಕಿಸಬಹುದು. ಅಥವಾ ದೂರವಾಣಿ ಸಂಖ್ಯೆ 011—24368641, 09650394796/91 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT