ಭಾರಿ ಮಳೆ, ಮನೆಗಳಿಗೆ ನೀರು

ಶನಿವಾರ, ಮೇ 25, 2019
32 °C

ಭಾರಿ ಮಳೆ, ಮನೆಗಳಿಗೆ ನೀರು

Published:
Updated:

ವಿಜಯಪುರ: ಬಯಲು ಸೀಮೆ ಜನತೆಯ ಪಾಲಿಗೆ ಮಳೆ ವರವಾಗಿ ಬಂದರೂ ಚರಂಡಿಗಳ ಅವ್ಯವಸ್ಥೆಯಿಂದಾಗಿ ನೀರು ಮನೆಗಳಿಗೆ ನುಗ್ಗಿದೆ. ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಬಿದಲಪುರ ಗ್ರಾಮದಲ್ಲಿ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದೆ ಇರುವ ಕಾರಣ, ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ್ದರಿಂದ ಜನರು ಪರದಾಡುವಂತಾಗಿತ್ತು.

ಸ್ಥಳೀಯ ಮುಖಂಡ ನಾರಾಯಣಸ್ವಾಮಿ ಮಾತನಾಡಿ, 10 ವರ್ಷಗಳ ನಂತರ ಭಾರಿ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಗ್ರಾಮ ಪಂಚಾಯಿತಿಯವರು ಚರಂಡಿಗಳನ್ನು ಸ್ವಚ್ಛಗೊಳಿಸಿಲ್ಲ ಎಂದರು. ಈಗಲಾದರು ಗ್ರಾಮ ಪಂಚಾಯಿತಿಯವರು ಎಚ್ಚೆತ್ತುಕೊಂಡು ಮುಚ್ಚಿ ಹೋಗಿರುವ ಚರಂಡಿಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry