ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ

Last Updated 9 ಅಕ್ಟೋಬರ್ 2017, 5:47 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ದೇಶದಲ್ಲಿ ಪ್ರಗತಿಪರರು, ಚಿಂತಕರು, ವಿಚಾರವಾದಿಗಳು ಮುಕ್ತವಾಗಿ ಏನನ್ನೂ ಮಾತನಾಡದ ಸ್ಥಿತಿ ಇದೆ’ ಎಂದು ಬೆಂಗಳೂರಿನ ದೇವರಾಜ‌ ಅರಸು ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ.ಎನ್.ವಿ.ನರಸಿಂಹಯ್ಯ ಆತಂಕ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧರ್ಮದ ವಿಚಾರವಾಗಿ ಮುಕ್ತವಾಗಿ ಮಾತನಾಡಿದರೆ ಹತ್ಯೆ ಮಾಡಲಾಗುತ್ತಿದೆ. ಸರ್ವಾಧಿಕಾರಿ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ’ ಎಂದು ದೂರಿದರು.

‘ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಇಡೀ ವಿಶ್ವವೇ ಖಂಡಿಸುತ್ತಿದೆ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಇದು ದುರಂತ’ ಎಂದರು.

‘ನಾವು ಅಧಿಕಾರಕ್ಕೆ ಬಂದರೆ ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ಮರಳಿ ತರುತ್ತೇವೆ. ಪ್ರತಿಯೊಬ್ಬರ ಖಾತೆಗೂ ತಲಾ ₹ 15 ಲಕ್ಷ ಹಾಕುತ್ತೇವೆ ಎಂದಿದ್ದರು. 2 ಕೋಟಿ ಉದ್ಯೋಗಗಳನ್ನು ಸೃಷ್ಟಿ ಮಾಡುವ ಭರವಸೆ ನೀಡಿದ್ದರು.

ದರೆ ಅವರ ಭರವಸೆಗಳಲ್ಲಿ ಒಂದೂ ಈಡೇರಿಲ್ಲ. ಜನರು ಮೋಸ ಹೋಗಿದ್ದಾರೆ’ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಸವಿತಾ ಸಮಾಜದ ಅಧ್ಯಕ್ಷ ಎ.ಲಕ್ಷ್ಮಿನಾರಾಯಣ, ಅಹಿಂದ ಮುಖಂಡ ಎಮ್.ಎಚ್.ಅಬ್ದುಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT