‘ಗಾಂಧೀಜಿ ಕನಸು ನನಸಾಗಿಸಲು ಶ್ರಮಿಸಿ’

ಮಂಗಳವಾರ, ಜೂನ್ 18, 2019
23 °C

‘ಗಾಂಧೀಜಿ ಕನಸು ನನಸಾಗಿಸಲು ಶ್ರಮಿಸಿ’

Published:
Updated:

ವಿಜಯಪುರ: ಮಹಾತ್ಮ ಗಾಂಧೀಜಿ ಯವರ ಸ್ವಚ್ಛ ಭಾರತ ಕನಸನ್ನು ನನಸು ಮಾಡುವಲ್ಲಿ ಶ್ರಮಿಸುತ್ತಿರುವ ಪ್ರಧಾನಿ ಮೋದಿಯವರಿಗೆ ಪ್ರತಿಯೊಬ್ಬರು ಕೈಜೋಡಿಸಿ ಯಶಸ್ಸುಗೊಳಿಸಬೇಕು ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದರು.

ಇಲ್ಲಿನ ಆದರ್ಶ ನಗರದ ಬಡಾ ವಣೆಯ ಮಲ್ಲಿಕಾರ್ಜುನ ದೇವ ಸ್ಥಾನದಲ್ಲಿ ಭಾನುವಾರ ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರವನ್ನು ತಂದು ಕೊಟ್ಟ ಅಹಿಂಸಾವಾದಿ ಮಹತ್ಮಾ ಗಾಂಧೀಜಿ ಕನಸಾದ ಸ್ವಚ್ಛ ಭಾರತ ನನಸು ಮಾಡುವಲ್ಲಿ ಈವರೆಗೆ ಯಾವ ಪ್ರಧಾನಿಯೂ ಮಾಡಲಿಲ್ಲ, ಅದನ್ನು ಮೋದಿ ಮಾಡುತ್ತಿದ್ದಾರೆ. ಅದಕ್ಕೆ ಎಲ್ಲರ ಸಹಕಾರ ಅವಶ್ಯ ಎಂದರು.

ದೇಶದಲ್ಲಿ ಸ್ವಚ್ಛ ಭಾರತ ಅಭಿಯಾನ ದೊಡ್ಡ ಆಂದೋಲನವೇ ಆಗಿದೆ. ಬಿಜೆಪಿ ಪಕ್ಷದ ದೊಡ್ಡ ದೊಡ್ಡ ನಾಯಕರಿಂದ ಸಾಮಾನ್ಯ ಕಾರ್ಯಕರ್ತನೂ ಸಹ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಅದೇ ರೀತಿ ಪ್ರತಿಯೊಬ್ಬರು ತಮ್ಮ ಮನೆ, ಬಡವಾಣೆ, ವಾರ್ಡ, ನಗರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಕನಸು ನನಸು ಮಾಡಬೇಕು ಎಂದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿದರು. ಶಿವರುದ್ರ ಬಾಗಲಕೋಟ, ಪ್ರಕಾಶ ಅಕ್ಕಲಕೋಟ, ಭೀಮಾಶಂಕರ ಹದನೂರ, ಮಳುಗೌಡ ಪಾಟೀಲ,ಗೂಳಪ್ಪ ಶಟಗಾರ, ರಾಹುಲ ಜಾಧವ, ಅಲ್ತಾಫ ಇಟಗಿ, ಆನಂದ ದುಮಾಳೆ, ಅಶೋಕ ಬೆಲ್ಲದ, ಈರಣ್ಣ ಚಿಂಚಲಿ, ಚಿದಾನಂದ ಚಲವಾದಿ, ಈರಣ್ಣ ಪಟ್ಟಣಶಟ್ಟಿ, ಕೃಷ್ಣ ಗುನ್ನಾಳಕರ, ಶಿವಾಜಿ ಪಾಟೀಲ, ಮಹೇಶ ಒಡೆಯರ, ಪರಶುರಾಮ ಹೊಸಪೇಟ, ಪಾಪುಸಿಂಗ ರಜಪೂತ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry