ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್‌ ಕುಮಾರ ಶಿವಯೋಗಿಗಳ ವಿರುದ್ಧ ಹೇಳಿಕೆ ಸಲ್ಲ: ಹೂಗಾರ

Last Updated 9 ಅಕ್ಟೋಬರ್ 2017, 9:34 IST
ಅಕ್ಷರ ಗಾತ್ರ

ಕೆಂಭಾವಿ: ‘ಲಿಂಗಾಯತ ಸ್ವತಂತ್ರ ಧರ್ಮದ ವಿಚಾರವನ್ನು ಮುಂದಿಟ್ಟುಕೊಂಡು ವೀರಶೈವ ಲಿಂಗಾಯತ ಧರ್ಮವನ್ನು ವಿಭಜಿಸಲು ಹೊರಟಿರುವ ಮಾತೆ ಮಹಾದೇವಿಯವರು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ’ ಎಂದು ಪ್ರವಚನಕಾರ ನಾಗರಾಜ ಶಾಸ್ತ್ರಿ ಹೂಗಾರ ಆರೋಪಿಸಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾನಗಲ್‌ ಕುಮಾರ ಶಿವಯೋಗಿಗಳು ಎಂತವರು ಎಂಬುದು ಇಡೀ ನಾಡಿಗೆ ತಿಳಿದಿದೆ. ಆದರೆ, ವೈಯಕ್ತಿಕ ಲಾಭಕ್ಕಾಗಿ ರಾಜಕೀಯ ಪ್ರೇರಿತವಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಮಾತೆ ಮಹಾದೇವಿಯವರು ಹಾನಗಲ್‌ ಶಿವಯೋಗಿಗಳ ಕುರಿತು ನೀಡಿರುವ ಹೇಳಿಕೆ ಹಿಂಪಡೆಯಬೇಕು. ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಶಿವಯೋಗಿಗಳಳು ಯಾವುದೇ ಪೀಠವನ್ನು ಬಯಸಿದವರಲ್ಲ. ತಮ್ಮದೇ ಆದ ಹಾನಗಲ್‌ ಪೀಠ ತ್ಯಾಗಮಾಡಿ ಸಮಾಜ ಸೇವೆಗೆ ಕಂಕಣಬದ್ಧರಾಗಿ ನಿಂತವರು. ಸಂಗೀತ, ಸಾಹಿತ್ಯ, ಕಲೆ, ನಾಟಕ, ಯೋಗ, ಕೃಷಿ, ಶಿಕ್ಷಣ, ಮುದ್ರಣ ಇತ್ಯಾದಿ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ್ದಾರೆ. ಅದು ಇಂದಿಗೂ ಜನಮಾನಸದಲ್ಲಿ ಉಳಿದಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT