ಕಾಂಗ್ರೆಸ್‌ನಲ್ಲಿ ಅಧ್ಯಕ್ಷರಾಗಲು ಇಬ್ಬರಿಗೆ ಸಾಧ್ಯ! ಅದು, ತಾಯಿ ಮತ್ತು ಮಗನಿಗೆ ಮಾತ್ರ: ಮಣಿಶಂಕರ್ ಅಯ್ಯರ್

ಸೋಮವಾರ, ಮೇ 20, 2019
28 °C

ಕಾಂಗ್ರೆಸ್‌ನಲ್ಲಿ ಅಧ್ಯಕ್ಷರಾಗಲು ಇಬ್ಬರಿಗೆ ಸಾಧ್ಯ! ಅದು, ತಾಯಿ ಮತ್ತು ಮಗನಿಗೆ ಮಾತ್ರ: ಮಣಿಶಂಕರ್ ಅಯ್ಯರ್

Published:
Updated:
ಕಾಂಗ್ರೆಸ್‌ನಲ್ಲಿ ಅಧ್ಯಕ್ಷರಾಗಲು ಇಬ್ಬರಿಗೆ ಸಾಧ್ಯ! ಅದು, ತಾಯಿ ಮತ್ತು ಮಗನಿಗೆ ಮಾತ್ರ: ಮಣಿಶಂಕರ್ ಅಯ್ಯರ್

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ  ಅಧ್ಯಕ್ಷರಾಗಲು ಇಬ್ಬರಿಗೆ ಮಾತ್ರ ಸಾಧ್ಯ! ಆದು ತಾಯಿ ಮತ್ತು ಮಗನಿಗೆ ಮಾತ್ರ ಎಂದು ಕಾಂಗ್ರಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್‌ ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಮಣಿಶಂಕರ್‌ ಅಯ್ಯರ್ ಅವರ ಈ ಹೇಳಿಕೆ ಕಾಂಗ್ರಸ್ ಪಕ್ಷದಲ್ಲಿ ಮುಜುಗರವನ್ನು ಉಂಟುಮಾಡಿದೆ. ಕಾಂಗ್ರಸ್ ಪಕ್ಷ ಎಂದರೆ ’ ತಾಯಿ ಮಗನ ಪಕ್ಷ’ ಎಂದು ಇತರೆ ಪಕ್ಷಗಳು ಟೀಕೆ ಮಾಡುತ್ತಿದ್ದವು. ಇದೀಗ ಸ್ವಪಕ್ಷದ ಹಿರಿಯ ನಾಯಕರೊಬ್ಬರು ಈ ರೀತಿ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಈಗಾಗಲೇ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ ಎಂದರು.

ಚುನಾವಣೆ ಎದುರಿಸಲು ಜನಬೆಂಬಲ ಬೇಕು ಆದರೆ ಪಕ್ಷದಲ್ಲಿ ಒಬ್ಬರೇ ವ್ಯಕ್ತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾದರೆ ಜನತೆ ಹಾಗೂ ಚುನಾವಣೆ ಯಾಕೆ ಬೇಕು ಎಂದು ಮಣಿಶಂಕರ್ ಅಯ್ಯರ್ ಪ್ರಶ್ನೆ ಮಾಡಿದ್ದಾರೆ.

ಮಣಿಶಂಕರ್ ಅಯ್ಯರ್ ಅವರು ಸೋನಿಯಾಗಾಂಧಿ ಮತ್ತು ರಾಹುಲ್‌ ಗಾಂಧಿಯನ್ನು ಪರೋಕ್ಷವಾಗಿ ಟೀಕೆ ಮಾಡಿರುವುದು ಪಕ್ಷದಲ್ಲಿ ಅಂತರಿಕ ಭಿನ್ನಾಭಿಪ್ರಾಯ ಇರುವುದನ್ನು ಎತ್ತಿ ತೋರಿಸುತ್ತದೆ ಎಂದು ಬಿಜೆಪಿ ಟೀಕಿಸಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry