ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಸಿ.ಎಂ ಕೈವಾಡ: ಶೆಟ್ಟರ್

Last Updated 9 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಬಿಜೆಪಿ ವರಿಷ್ಠರಿಗೆ ಕಪ್ಪ ಕಾಣಿಕೆ ನೀಡಲಾಗಿದೆ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನಂತಕುಮಾರ್‌ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಡುವೆ ನಡೆದಿರುವ ಸಂಭಾಷಣೆ ಅಸಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಕೊಟ್ಟಿರುವ ವರದಿ ಸಂಶಯದಿಂದ ಕೂಡಿದೆ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡ ಇದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌ ಸೋಮವಾರ ಇಲ್ಲಿ ದೂರಿದರು.

‘ಸೈಬರ್‌ ಕ್ರೈಂ ವಿಭಾಗದವರು ಸೆಪ್ಟೆಂಬರ್‌ 13ರಂದು ನೀಡಿದ್ದ ಆಡಿಯೊ, ವಿಡಿಯೊ ಸಿ.ಡಿಯನ್ನು ವಿಧಿವಿಜ್ಞಾನ ಪ್ರಯೋಗಾಲಯವು ಅಧ್ಯಯನ ಮಾಡಿ ಅಕ್ಟೋಬರ್‌ 4ಕ್ಕೆ ವರದಿ ಕೊಟ್ಟಿದೆ. ವಿಧಿವಿಜ್ಞಾನ ಪ್ರಯೋಗಾಲಯ ಇಷ್ಟು ತ್ವರಿತವಾಗಿ ವರದಿ ಕೊಟ್ಟ ನಿದರ್ಶನಗಳೇ ಇಲ್ಲ. ಹೀಗಾಗಿ ಇದೊಂದು ಸಂಚಿನ ವರದಿ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

‘ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದ ಬಳಿಕ ಅವರ ವಿರುದ್ಧ ಇಲ್ಲಸಲ್ಲದ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ. ಮುಖ್ಯಮಂತ್ರಿಯವರ ಕುಮ್ಮಕ್ಕಿನಿಂದಲೇ ಈ ಕೆಲಸ ನಡೆಯುತ್ತಿದೆ. ಯಡಿಯೂರಪ್ಪ ಅವರನ್ನು ಬಂಧಿಸಲು ಇನ್ನಿಲ್ಲದ ಪ್ರಯತ್ನ ನಡೆದಿದೆ’ ಎಂದು ಅವರು ದೂರಿದರು.

‘ರಾಜಕೀಯ ವಿರೋಧಿಗಳನ್ನು ಹಣಿಯಲು ಸಿದ್ದರಾಮಯ್ಯ ಅವರು ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಗೃಹ ಸಚಿವರಸಲಹೆಗಾರ ಕೆಂಪಯ್ಯ, ಎ.ಸಿ.ಬಿ ಡಿಜಿಪಿ ಎಂ.ಎನ್‌.ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಸಿದ್ದರಾಮಯ್ಯನವರು ಈ ರೀತಿಯ ರಾಜಕೀಯ ವೈಷಮ್ಯದತೀರ್ಮಾನಗಳನ್ನು ಕೈಬಿಡದಿದ್ದರೆ ಅವರ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಿದೆ’ ಎಂದು ಅವರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT