‘ಮರಾಠಿ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ’

ಶುಕ್ರವಾರ, ಮೇ 24, 2019
29 °C

‘ಮರಾಠಿ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ’

Published:
Updated:

ಬೆಳಗಾವಿ: ‘ಜಿಲ್ಲೆಯ ಎಲ್ಲ ಮರಾಠಿ ಹಾಗೂ ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲೂ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕು. ಇಲ್ಲವಾದಲ್ಲಿ ಅಂತಹ ಶಾಲೆಗಳ ಮುಖ್ಯಶಿಕ್ಷಕರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಸ್‌. ಜಿಯಾವುಲ್ಲಾ ಸೋಮವಾರ ಎಚ್ಚರಿಕೆ ನೀಡಿದರು.

ರಾಜ್ಯೋತ್ಸವ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಕನ್ನಡಪರ ಹೋರಾಟಗಾರರ ಮನವಿಗೆ ಸ್ಪಂದಿಸಿದ ಅವರು, ‘ಸಂಬಂಧಪಟ್ಟ ಅದಿಕಾರಿಗಳು ಈ ನಿಟ್ಟಿನಲ್ಲಿ ಗಮನಹರಿಸಬೇಕು. ಈಗಲೇ ಸುತ್ತೋಲೆ ಹೊರಡಿಸಿ ಎಚ್ಚರಿಕೆ ನೀಡಬೇಕು. ಉಲ್ಲಂಘಿಸಿದವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬೇಕು’ ಎಂದು ಸೂಚಿಸಿದರು.

ರಾಜ್ಯೋತ್ಸವ ಬಹಿಷ್ಕರಿಸಿ, ನಗರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ನಡೆಸುವ ಕರಾಳ ದಿನಾಚರಣೆ ಮೆರವಣಿಗೆಗೆ ಅವಕಾಶ ನೀಡಬಾರದು ಎಂದೂ ಹೋರಾಟಗಾರರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry