ಐ.ಟಿ ಘಟಕಕ್ಕೆ ಮಹೇಶಪ್ಪ: ಕಾಂಗ್ರೆಸ್‌ನಲ್ಲೇ ವಿರೋಧ

ಬುಧವಾರ, ಜೂನ್ 26, 2019
25 °C

ಐ.ಟಿ ಘಟಕಕ್ಕೆ ಮಹೇಶಪ್ಪ: ಕಾಂಗ್ರೆಸ್‌ನಲ್ಲೇ ವಿರೋಧ

Published:
Updated:

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕುಲಪತಿ ಹುದ್ದೆಯಿಂದ ಅಮಾನತಾಗಿದ್ದ ಎಚ್.ಮಹೇಶಪ್ಪ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಹಿತಿ ತಂತ್ರಜ್ಞಾನ (ಐ.ಟಿ) ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿರುವುದಕ್ಕೆ ‍ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ.

‘ಮಹೇಶಪ್ಪ ನೇಮಕ ಮಾಡಿದ್ದರಲ್ಲಿ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಆದರೆ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ಈ ನೇಮಕವನ್ನು ಬಲವಾಗಿ ಆಕ್ಷೇಪಿಸಿದ್ದಾರೆ.

"ಕುಲಪತಿಯಾಗಿದ್ದ ಅವಧಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಸಿದ್ದರು’ ಎನ್ನಲಾದ ಆರೋಪ ಎಚ್. ಮಹೇಶಪ್ಪ ಅವರ ಮೇಲೆ ಬಂದಿತ್ತು. ಈ ಕುರಿತು ರಾಜ್ಯಪಾಲ ವಜುಭಾಯಿ ವಾಲಾ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್‌. ಕೇಶವನಾರಾಯಣ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚಿಸಿದ್ದರು. ಸಮಿತಿ ನೀಡಿದ ವರದಿಯಲ್ಲಿ ಮಹೇಶಪ್ಪ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಹೇಳಲಾಗಿತ್ತು. ಹೀಗಾಗಿ, ಅವರನ್ನು ಕುಲಪತಿ ಹುದ್ದೆಯಿಂದ  ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು.

ಚುನಾವಣಾ ಪ್ರಚಾರಕ್ಕಾಗಿ ರಚಿಸಲಾಗಿರುವ ಐ.ಟಿ ಘಟಕಕ್ಕೆ ಮಹೇಶಪ್ಪ ಅವರನ್ನು ನೇಮಿಸಲಾಗಿದೆ. ‘ಭ್ರಷ್ಟಾಚಾರ ಆರೋಪ ಹೊತ್ತವರನ್ನು ಕಾಂಗ್ರೆಸ್‌ ನೇಮಕ ಮಾಡಿದ್ದು ಖಂಡನೀಯ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ‘ಜೈಲಿಗೆ ಹೋಗಿ ಬಂದ ಯಡಿಯೂರಪ್ಪ ಅವರೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ. ಇದು ಅದಕ್ಕಿಂತಲೂ ದೊಡ್ಡ ಅಪರಾಧವೇ. ಯಡಿಯೂರಪ್ಪ ಮಾಡಿದ ತಪ್ಪಿಗಿಂತ ದೊಡ್ಡ ತಪ್ಪು ಅವರು (ಮಹೇಶಪ್ಪ) ಮಾಡಿದ್ದಾರಾ’ ಎಂದು ಪ್ರಶ್ನಿಸಿದರು.

‘ಹಲವು ಹಗರಣಗಳಲ್ಲಿ ಮಹೇಶಪ್ಪ ಹೆಸರಿದೆ. ಕೆಪಿಸಿಸಿಗೆ ಅವರ ನೇಮಕ ಸರಿಯಲ್ಲ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ’ ಎಂದು ರಾಯರಡ್ಡಿ ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry