ಡಾ.ಕೃಷ್ಣಪ್ರಸಾದ್‌ಗೆ ಕಾಂತಾವರ ಸಂಘದ ಗೌರವ ಪ್ರಶಸ್ತಿ

ಮಂಗಳವಾರ, ಜೂನ್ 25, 2019
24 °C

ಡಾ.ಕೃಷ್ಣಪ್ರಸಾದ್‌ಗೆ ಕಾಂತಾವರ ಸಂಘದ ಗೌರವ ಪ್ರಶಸ್ತಿ

Published:
Updated:
ಡಾ.ಕೃಷ್ಣಪ್ರಸಾದ್‌ಗೆ ಕಾಂತಾವರ ಸಂಘದ ಗೌರವ ಪ್ರಶಸ್ತಿ

ಮೂಡುಬಿದಿರೆ: ಕಾಂತಾವರ ಕನ್ನಡ ಸಂಘವು ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ನಾಡಿಗೆ ವಿಶೇಷ ಕೊಡುಗೆ ನೀಡಿದ ಸಾಧಕರಿಗೆ ನೀಡುವ ವಾರ್ಷಿಕ ಗೌರವ ಪ್ರಶಸ್ತಿಗೆ ಈ ಬಾರಿ ಉಡುಪಿಯ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣ ಪ್ರಸಾದ್ ಕೂಡ್ಲು ಅವರನ್ನು ಆಯ್ಕೆ ಮಾಡಲಾಗಿದೆ.

ನೇತ್ರ ಚಿಕಿತ್ಸಾ ಕ್ಷೇತ್ರದಲ್ಲಿ ಈ ಹಿಂದೆ ಡಾ.ಎಂ.ಸಿ.ಮೋದಿ ಅವರು ಮಾಡಿದ ಸಾಧನೆಯ ಹತ್ತಿರಕ್ಕೆ ಬರುತ್ತಿರುವ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರಿಗೆ ಈ ಪ್ರಶಸ್ತಿ ನೀಡಲು ನಿಶ್ಚಯಿಸಲಾಗಿದೆ ಎಂದು ಸಂಘದ ಕಾರ್ಯಾಧ್ಯಕ್ಷ ಡಾ.ನಾ.ಮೊಗಸಾಲೆ ತಿಳಿಸಿದ್ದಾರೆ.

ನವೆಂಬರ್ 2ರಂದು ಕಾಂತಾವರ ಕನ್ನಡ ಭವನದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸದ ಎಂ.ವೀರಪ್ಪ ಮೊಯಿಲಿ ಅಧ್ಯಕ್ಷತೆ ವಹಿಸಲಿದ್ದು, ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಪಾಲ್ಗೊಳ್ಳುವರು. ಪ್ರಶಸ್ತಿಯು ತಾಮ್ರಪತ್ರ ಹಾಗೂ ಸನ್ಮಾನವನ್ನು ಒಳಗೊಂಡಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry