ವಿದೇಶ ಪ್ರವಾಸದಲ್ಲಿ ಬ್ಯಾಂಕ್‌ಗೆಳಿಗೆ ಭೇಟಿ ನೀಡುವುದಿಲ್ಲ: ಕಾರ್ತಿ ಚಿದಂಬರಂ

ಭಾನುವಾರ, ಜೂನ್ 16, 2019
22 °C

ವಿದೇಶ ಪ್ರವಾಸದಲ್ಲಿ ಬ್ಯಾಂಕ್‌ಗೆಳಿಗೆ ಭೇಟಿ ನೀಡುವುದಿಲ್ಲ: ಕಾರ್ತಿ ಚಿದಂಬರಂ

Published:
Updated:
ವಿದೇಶ ಪ್ರವಾಸದಲ್ಲಿ ಬ್ಯಾಂಕ್‌ಗೆಳಿಗೆ ಭೇಟಿ ನೀಡುವುದಿಲ್ಲ: ಕಾರ್ತಿ ಚಿದಂಬರಂ

ನವದೆಹಲಿ: ವಿದೇಶ ಪ್ರವಾಸದ ವೇಳೆ ಯಾವುದೇ ಬ್ಯಾಂಕ್‌ಗಳಿಗೆ ಭೇಟಿ ನೀಡುವುದಿಲ್ಲ ಎಂದು ಕಾರ್ತಿ ಚಿದಂಬರಂ ಅವರು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

‘ಮಗಳ ವಿದ್ಯಾಭ್ಯಾಸದ ಸಲುವಾಗಿ ಕಾರ್ತಿ ಅವರು ಕೇಂಬ್ರಿಡ್ಜ್‌ಗೆ ತೆರಳಬೇಕೆಂದು ಕೇಳಿಕೊಳ್ಳುತ್ತಿದ್ದಾರೆ. ವಿದೇಶದಲ್ಲಿ ಬ್ಯಾಂಕ್‌ಗಳಿಗೆ ಭೇಟಿ ನೀಡುವುದಿಲ್ಲ ಎಂದು ಪ್ರಮಾಣಪತ್ರ ನೀಡಲು ಅವರು ಸಿದ್ಧರಿದ್ದಾರೆ’ ಎಂದು ಅವರ ಪರ ವಕೀಲರಾಗಿರುವ ಕಪಿಲ್ ಸಿಬಲ್ ಸು‍ಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠಕ್ಕೆ ಈ ಅರ್ಜಿ ಸಲ್ಲಿಸಲಾಗಿದೆ. ಸಿಬಿಐ ಪರ ವಕೀಲರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಇಲ್ಲದ ಕಾರಣ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ಮಂಗಳವಾರಕ್ಕೆ ಮುಂದೂಡಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry