ಲೈಂಗಿಕ ಕಿರುಕುಳ: ಪಾದ್ರಿ ಬಂಧನ

ಬುಧವಾರ, ಜೂನ್ 26, 2019
28 °C

ಲೈಂಗಿಕ ಕಿರುಕುಳ: ಪಾದ್ರಿ ಬಂಧನ

Published:
Updated:

ತಿರುವನಂತಪುರ: 10 ವರ್ಷದ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಾದ್ರಿಯೊಬ್ಬರನ್ನು ಬಂಧಿಸಲಾಗಿದೆ.

ಬೈಬಲ್ ಪಾಠ ಹೇಳಿಸಿಕೊಳ್ಳುವ ಸಲುವಾಗಿ ಬಾಲಕಿ ಭಾನುವಾರ ಕಂದಂತಿಟ್ಟ ಸಿಎಸ್‌ಐ ಚರ್ಚ್‌ಗೆ ತೆರಳಿದ್ದ ಸಂದರ್ಭ ಪಾದ್ರಿ ದೇವರಾಜ್ (65) ಎನ್ನುವವರು ಈಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ‍ಪೊಸ್ಕೊ ಕಾಯ್ದೆ ಹಾಗೂ ಭಾರತೀಯ ದಂಡಸಂಹಿತೆಯ 376ನೇ ಕಲಂ ಅಡಿಯಲ್ಲಿ ಪಾದ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಎದುರು ಆರೋಪಿಯನ್ನು ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಚರ್ಚ್‌ನಿಂದ ಕರೆದೊಯ್ಯಲು ಬಂದ ಸಂದರ್ಭದಲ್ಲಿ, ಪಾದ್ರಿ ತಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದುದನ್ನು ನೋಡಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ಬಾಲಕಿ ತಂದೆ ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ ಆರೋಪಿ ಈ ಚರ್ಚ್‌ನಲ್ಲಿ ಪಾದ್ರಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry