ಅ.25ಕ್ಕೆ ಜಂಟಿ ಅಧಿವೇಶನ: ರಾಷ್ಟ್ರಪತಿ ಕೋವಿಂದ್ ಭಾಗಿ

ಸೋಮವಾರ, ಜೂನ್ 24, 2019
26 °C

ಅ.25ಕ್ಕೆ ಜಂಟಿ ಅಧಿವೇಶನ: ರಾಷ್ಟ್ರಪತಿ ಕೋವಿಂದ್ ಭಾಗಿ

Published:
Updated:
ಅ.25ಕ್ಕೆ ಜಂಟಿ ಅಧಿವೇಶನ: ರಾಷ್ಟ್ರಪತಿ ಕೋವಿಂದ್ ಭಾಗಿ

ನವದೆಹಲಿ: ವಿಧಾನಸೌಧದ ವಜ್ರಮಹೋತ್ಸವದ ಅಂಗವಾಗಿ ಇದೇ 25ರಂದು ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಇದರಲ್ಲಿ ಭಾಗವಹಿಸಲಿದ್ದಾರೆ.

ವಿಧಾನಸಭೆಯ ಸ್ಪೀಕರ್ ಕೆ.ಬಿ. ಕೋಳಿವಾಡ ನೇತೃತ್ವದ ನಿಯೋಗ ಕೋವಿಂದ್‌ ಅವರಿಗೆ ಸೋಮವಾರ ಅಧಿಕೃತ ಆಹ್ವಾನ ಆಹ್ವಾನ ನೀಡಿತು.

ವಿಧಾನಸೌಧದ ವಜ್ರಮಹೋತ್ಸವ ಕಾರ್ಯಕ್ರಮವನ್ನು ಈ ತಿಂಗಳೇ ಆಯೋಜಿಸಲು ನಿರ್ಧರಿಸಲಾಗಿದೆ. ಈ ವೇಳೆ ನಡೆಯಲಿರುವ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಭಾಗಿಯಾಗುವಂತೆ ರಾಷ್ಟ್ರಪತಿಯವರಿಗೆ ಮನವಿ ಮಾಡಲಾಯಿತು. ರಾಜ್ಯ ಸರ್ಕಾರದ ಆಹ್ವಾನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಷ್ಟ್ರಪತಿಯವರು ಇದೇ 25ರಂದು ಜಂಟಿ ಅಧಿವೇಶನ ಆಯೋಜಿಸುವಂತೆ ಸಲಹೆ ನೀಡಿದ್ದು, ಭಾಗಿಯಾಗುವ ಭರವಸೆ ನೀಡಿದ್ದಾರೆ ಎಂದು ಕೆ.ಬಿ ಕೋಳಿವಾಡ ಸುದ್ದಿಗಾರರಿಗೆ ತಿಳಿಸಿದರು.

ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳ ಕಟ್ಟಡಗಳಲ್ಲಿ ಕರ್ನಾಟಕದ ವಿಧಾನಸೌಧದ ಕಟ್ಟಡ ಅತ್ಯಂತ ಆಕರ್ಷಣೀಯವಾಗಿದ್ದು, ವಾಸ್ತು ವೈಭವದಿಂದ ಕೂಡಿದೆ. ಆ ಸೌಧದ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಸಂತಸದ ವಿಷಯ ಎಂದು ರಾಷ್ಟ್ರಪತಿಯವರು ಹೇಳಿದ್ದಾಗಿ ಅವರು ವಿವರಿಸಿದರು.

ವಿಧಾನ ಪರಿಷತ್‌ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಸದಸ್ಯರಾದ ಐವಾನ್ ಡಿಸೋಜಾ, ಗಣೇಶ್ ಕಾರ್ಣಿಕ್‌ ಹಾಗೂ ವಿಧಾನ ಮಂಡಲದ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry