ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಾದಗಳ ನಡುವೆ ನಟ ಪ್ರಕಾಶ್‌ ರೈಗೆ ಪ್ರಶಸ್ತಿ ಪ್ರದಾನ ಇಂದು

Last Updated 9 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಕೋಟ (ಬ್ರಹ್ಮಾವರ): ವಿವಾದಿತ ಹೇಳಿಕೆ ನೀಡಿದ ನಟ ಪ್ರಕಾಶ್‌ ರೈ ಅವರಿಗೆ ಪರ ವಿರೋಧಗಳ ನಡುವೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಮಂಗಳವಾರ ನೀಡಲು ಸಿದ್ಧತೆ ನಡೆದಿದೆ.

ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ, ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್ ಸಹಯೋಗದಲ್ಲಿ ನೀಡಲಾಗುತ್ತಿರುವ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳವಾರ ಕೋಟದ ಡಾ. ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯಲಿದೆ.

ಸಂಜೆ 3.30ಕ್ಕೆ ನಡೆಯುವ ಸಮಾರಂಭವನ್ನು ಸಚಿವ ಪ್ರಮೋದ್ ಮಧ್ವರಾಜ್‌ ಉದ್ಘಾಟಿಸುವರು. ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್‌.ಪ್ರಮೋದ್ ಹಂದೆ ಅಧ್ಯಕ್ಷತೆ ವಹಿಸುವರು. ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್‌ಚಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಮತ್ತಿತರರು ಭಾಗವಹಿಸುವರು. ಇದಕ್ಕೂ ಮುನ್ನ ಪಂಚಾಯಿತಿ ಸಭಾಂಗಣದಿಂದ ಭವ್ಯ ಮೆರವಣಿಗೆಯಲ್ಲಿ ಪುರಸ್ಕೃತರನ್ನು ಕಾರಂತ ಕಲಾಭವನಕ್ಕೆ ಕರೆತರಲಾಗುವುದು. ಸಂಜೆ 6ಕ್ಕೆ ತೆಂಕು ಬಡಗು ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ನಾಟ್ಯ ವೈಭವ ಕಾರ್ಯಕ್ರಮ ನಡೆಯಲಿದೆ.
ಪರ ವಿರೋಧ:

ಪ್ರಕಾಶ್‌ ರೈ ಅವರಿಗೆ ಪ್ರಶಸ್ತಿ ನೀಡುವ ಬಗ್ಗೆ ಕೇವಲ ಒಂದೆರಡು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರೆ ಹಲವಾರು ಸಂಘಟನೆಗಳು ಪರವಾಗಿ ನಿಂತಿವೆ. ಈ ಎಲ್ಲ ವಿಷಯಗಳನ್ನು ಪರಿಗಣಿಸಿ ಮಂಗಳವಾರ ಕೋಟ ಕಾರಂತ ಥೀಂ ಪಾರ್ಕ್‌ ಸುತ್ತಮುತ್ತ ಪೊಲೀಸ್‌ ಭದ್ರತೆಯನ್ನೂ ಹೆಚ್ಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT