ಚಾಕುವಿನಿಂದ ಇರಿದು ಟೆಕಿ ಹತ್ಯೆ

ಭಾನುವಾರ, ಜೂನ್ 16, 2019
22 °C

ಚಾಕುವಿನಿಂದ ಇರಿದು ಟೆಕಿ ಹತ್ಯೆ

Published:
Updated:
ಚಾಕುವಿನಿಂದ ಇರಿದು ಟೆಕಿ ಹತ್ಯೆ

ಬೆಂಗಳೂರು: ತಾವರೆಕೆರೆ ಮುಖ್ಯರಸ್ತೆಯಲ್ಲಿ ಪ್ರಣಯ್ ಮಿಶ್ರಾ (24) ಎಂಬುವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಭಾನುವಾರ ರಾತ್ರಿ ಕೊಲೆ ಮಾಡಿದ್ದಾರೆ.

ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ ಒಡಿ‌ಶಾದ ಪ್ರಣಯ್‌, ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದು ಅಸೆಂಚರ್‌ ಕಂಪೆನಿಯಲ್ಲಿ ಕೆಲಸಕ್ಕೆ ಸೇರಿದ್ದರು. ಸುದ್ದುಗುಂಟೆಪಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.

‘ಭಾನುವಾರ ರಾತ್ರಿ ಬೇಗೂರಿನಲ್ಲಿರುವ ಸ್ನೇಹಿತನ ಕೊಠಡಿಗೆ ಹೋಗಿದ್ದ ಪ್ರಣಯ್‌, ಪಾರ್ಟಿ ಮಾಡಿದ್ದರು. ತಡರಾತ್ರಿ 2 ಗಂಟೆಯ ಸುಮಾರಿಗೆ ಸ್ನೇಹಿತ, ಅವರನ್ನು ಕ್ಯಾಬ್‌ನಲ್ಲಿ ಕರೆತಂದು ಸುದ್ದುಗುಂಟೆಪಾಳ್ಯದ ಮನೆಗೆ ಬಿಟ್ಟು ಹೋಗಿದ್ದರು’ ‘ಅದಾದ ಗಂಟೆ ಬಳಿಕ ಬಿ.ಟಿ.ಎಂ ಲೇಔಟ್‌ನಲ್ಲಿರುವ ಸ್ನೇಹಿತೆಗೆ ಕರೆ ಮಾಡಿದ್ದ ಪ್ರಣಯ್‌, ಅವರ ಮನೆಗೆ ಹೋಗುವುದಾಗಿ ಹೇಳಿದ್ದರು.

ಬಳಿಕ ಬೈಕ್‌ನಲ್ಲಿ ತಾವರೆಕೆರೆ ಮುಖ್ಯರಸ್ತೆ ಮಾರ್ಗವಾಗಿ ಹೊರಟಿದ್ದರು. ಚಾಕೊಲೇಟ್‌ ಫ್ಯಾಕ್ಟರಿ ಬಳಿ ಒಬ್ಬಂಟಿಯಾಗಿ ಹೋಗುತ್ತಿದ್ದ ಅವರನ್ನು ಅಡ್ಡಗಟ್ಟಿದ್ದ ಇಬ್ಬರು ದುಷ್ಕರ್ಮಿಗಳು, ಮೈಮೇಲೆ ಎರಗಿದ್ದರು. ಆಗ ಪ್ರಣಯ್‌ ಸ್ಥಳದಿಂದ ಓಡಲು ಆರಂಭಿಸಿದ್ದರು. ಬೆನ್ನಟ್ಟಿದ್ದ ದುಷ್ಕರ್ಮಿಗಳು ಚಾಕುವಿನಿಂದ ಅವರ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಣಯ್‌ನನ್ನು ಕಂಡ ಸ್ಥಳೀಯರು, ಅಪಘಾತವಾಗಿರಬಹುದು ಎಂದು ತಿಳಿದು ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗಮಧ್ಯೆಯೇ ಅವರು ಅಸುನೀಗಿರುವುದಾಗಿ ವೈದ್ಯರು ತಿಳಿಸಿದರು’ ಎಂದು ವಿವರಿಸಿದರು.

ಸ್ನೇಹಿತೆಯಿಂದ ಕರೆ: ‘ಮನೆಗೆ ಬರುತ್ತೇನೆ ಎಂದಿದ್ದ ಪ್ರಣಯ್‌, ಗಂಟೆ ಕಳೆದರೂ ಬಾರದಿದ್ದಾಗ ಸ್ನೇಹಿತೆಯು ಅವರ ಮೊಬೈಲ್‌ಗೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ್ದ ಸಾರ್ವಜನಿಕರು, ಪ್ರಣಯ್‌ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ತಿಳಿಸಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಪ್ರಣಯ್ ಬಳಿ ಮೊಬೈಲ್, ಪರ್ಸ್ ಎಲ್ಲವೂ ಹಾಗೇ ಇದೆ. ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ ಎನ್ನಲು ಸಾಧ್ಯವಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry