ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಡಾನೆ ಸಾವು

ಸೋಮವಾರ, ಜೂನ್ 17, 2019
27 °C

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಡಾನೆ ಸಾವು

Published:
Updated:
ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಡಾನೆ ಸಾವು

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಹಳಿ ದಾಟುತ್ತಿದ್ದ ಹೆಣ್ಣಾನೆಯೊಂದು ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೃತಪಟ್ಟಿದೆ. ಆಹಾರ ಅರಸಿ, ದಾಂಡೇಲಿ ಅರಣ್ಯ ಪ್ರದೇಶದಿಂದ ಆನೆಗಳ ಹಿಂಡೊಂದು ಇಲ್ಲಿಗೆ ಬಂದಿತ್ತು. ಮೃತಪಟ್ಟ ಆನೆ ಈ ಹಿಂಡಿಗೆ ಸೇರಿದ್ದು ಎಂದು ತಿಳಿದುಬಂದಿದೆ.

‘ಹಳಿ ದಾಟುತ್ತಿದ್ದ ಆನೆಗಳು, ರೈಲಿನ ಸದ್ದಿನಿಂದ ಗಾಬರಿಯಾಗಿ ಸೇತುವೆ ಬಳಿ ಓಡಿವೆ. ಹಳಿಗಳನ್ನು ಬಿಟ್ಟು ಪಕ್ಕದ ಕಂದಕಕ್ಕೆ ಹಾರಿದ ಅವು ಪ್ರಾಣಾಪಾಯದಿಂದ ಪಾರಾಗಿವೆ. ಆದರೆ, ಹಿಂಡಿನಿಂದ ಹಿಂದೆ ಇದ್ದ ಹೆಣ್ಣಾನೆ ಹಳಿ ದಾಟುವಾಗ ರೈಲಿಗೆ ಡಿಕ್ಕಿಯಾಗಿ, ಪಕ್ಕದಲ್ಲಿದ್ದ 20 ಅಡಿ ಎತ್ತರದ ಸೇತುವೆ ಮೇಲಿಂದ ಬಿದ್ದು ಮೃತಪಟ್ಟಿದೆ’ ಎಂದು ಖಾನಾಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಿ.ಬಿ ಪಾಟೀಲ ತಿಳಿಸಿದರು.

‘ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಗುರುರಾಜ ಮನಗೂಳಿ ನೇತೃತ್ವದ ವೈದ್ಯರ ತಂಡ ಆನೆಯ ಮರಣೋತ್ತರ ಪರೀಕ್ಷೆ ನಡೆಸಿತು. ಬಳಿಕ ಅಂತ್ಯಕ್ರಿಯೆ ನಡೆಸಲಾಯಿತು’ ಎಂದು ತಹಸೀಲ್ದಾರ್ ಶಿವಾನಂದ ಉಳ್ಳೇಗಡ್ಡಿ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry