ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶುದ್ಧ ನೀರು ಪೂರೈಕೆ: ರೋಗ ಭೀತಿ

Last Updated 10 ಅಕ್ಟೋಬರ್ 2017, 6:54 IST
ಅಕ್ಷರ ಗಾತ್ರ

ಯಲಬುರ್ಗಾ: 'ತಾಲ್ಲೂಕಿನ ತಾಳಕೇರಿ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದಲೂ ಅಶುದ್ಧ ಕುಡಿವ ನೀರು ಪೂರೈಕೆಯಾಗುತ್ತಿದ್ದು,  ಗ್ರಾಮಸ್ಥರು ವಿವಿಧ ರೋಗಕ್ಕೆ ತುತ್ತಾಗಿದ್ದಾರೆ' ಎಂದು ಗ್ರಾಮಸ್ಥರು ದೂರಿದ್ದಾರೆ.

‘ವಿವಿಧ ಕೊಳವೆಬಾವಿಗಳಿಂದ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಅಲ್ಲಲ್ಲಿ ಪೈಪ್‌ಗಳು ಒಡೆದಿವೆ. ನೀರಿನ ಟ್ಯಾಂಕ್‌ ಸ್ವಚ್ಛಗೊಳಿಸಿಲ್ಲ. ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಗ್ರಾಮದ ಮಾರುತಿ ನೀರಲೂಟಿ, ಹುಲಿಗೆಪ್ಪ ನಡೂಲಮನಿ ಆರೋಪಿಸಿದ್ದಾರೆ.

‘ಗ್ರಾಮದಲ್ಲಿ ಕೊಳಚೆ ನೀರ ಸಂಗ್ರಹವಾಗಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳಿಗೂ ಮನವಿ ಮಾಡಿದರೂ ಯಾರೊಬ್ಬರು ಕ್ರಮಕ್ಕೆ ಮುಂದಾಗಿಲ್ಲ. ಗ್ರಾಮದಲ್ಲಿ ಡೆಂಗಿ, ಚಿಕೂನ್‌ಗುನ್ಯಾ, ಮಲೇರಿಯಾಗೆ ಜನರು ತುತ್ತಾಗುತ್ತಿದ್ದಾರೆ.

ಹತ್ತಿರದಲ್ಲಿ ಆಸ್ಪತ್ರೆ ಇಲ್ಲದ ಕಾರಣ ದೂರದ ಹಿರೇವಂಕಲಕುಂಟಾ ಸಮುದಾಯ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವ ಅನಿವಾರ್ಯತೆ ಎದುರಾಗಿದೆ’ ಎಂದು ಅಂಬರೇಷ ಸಿಂದೋಗಿ, ಯಮನೂರಪ್ಪ ಆರೋಪಿಸಿದ್ದಾರೆ. ‘ಶೀಘ್ರ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ’ ಎಂದು ಗ್ರಾಮಸ್ಥರು
ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT