ಉತ್ತರ ಪ್ರದೇಶದಲ್ಲಿ ವಿಷಾನಿಲ ಸೇವನೆಯಿಂದ 300 ವಿದ್ಯಾರ್ಥಿಗಳು ಅಸ್ವಸ್ಥ; ಕೆಲವು ಮಕ್ಕಳ ಸ್ಥಿತಿ ಗಂಭೀರ

ಭಾನುವಾರ, ಜೂನ್ 16, 2019
22 °C

ಉತ್ತರ ಪ್ರದೇಶದಲ್ಲಿ ವಿಷಾನಿಲ ಸೇವನೆಯಿಂದ 300 ವಿದ್ಯಾರ್ಥಿಗಳು ಅಸ್ವಸ್ಥ; ಕೆಲವು ಮಕ್ಕಳ ಸ್ಥಿತಿ ಗಂಭೀರ

Published:
Updated:
ಉತ್ತರ ಪ್ರದೇಶದಲ್ಲಿ ವಿಷಾನಿಲ ಸೇವನೆಯಿಂದ 300 ವಿದ್ಯಾರ್ಥಿಗಳು ಅಸ್ವಸ್ಥ; ಕೆಲವು ಮಕ್ಕಳ ಸ್ಥಿತಿ ಗಂಭೀರ

ಲಖನೌ: ಇಲ್ಲಿನ ಶಾಮ್ಲಿ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಯೊಂದರಿಂದ ಹೊರಸೂಸಿದ ವಿಷಾನಿಲ ಸೇವನೆಯಿಂದ 300 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ಸಕ್ಕರೆ ಕಾರ್ಖಾನೆ ಬಳಿ ಇರುವ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳಿಗೆ ಮಂಗಳವಾರ ಬೆಳಗ್ಗೆ ಹೊಟ್ಟೆ ನೋವು, ಕಣ್ಣು ಉರಿ ಮತ್ತು  ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಈ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದರಲ್ಲಿ 30 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಇಲ್ಲಿನ ಸರ್ ಶಾದಿ ಲಾಲ್ ಸಕ್ಕರೆ ಕಾರ್ಖಾನೆಯ ತ್ಯಾಜ್ಯಗಳನ್ನು ರಸ್ತೆ ಬದಿಯಲ್ಲಿ ಸುರಿಯಲಾಗಿತ್ತು, ಅದೇ ರಸ್ತೆ ಹತ್ತಿರವೇ ಸರಸ್ವತಿ ವಿದ್ಯಾ ಮಂದಿರ್ ಮತ್ತು ಸರಸ್ವತಿ ಹೈಸ್ಕೂಲ್ ಇದೆ.
ಈ ಘಟನೆ ಬಗ್ಗೆ ತನಿಖೆ ನಡೆಸುವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶಹರನ್‍ಪುರದ ಪೊಲೀಸ್ ಆಯುಕ್ತರಿಗೆ ಆದೇಶಿಸಿದ್ದಾರೆ.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry