ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌, ಮಹಾರಾಷ್ಟ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಅಗ್ಗ

Last Updated 10 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಅಹಮದಾಬಾದ್‌: ಗುಜರಾತ್‌ ಮತ್ತು ಮಹಾರಾಷ್ಟ್ರ ಸರ್ಕಾರಗಳು ಮಂಗಳವಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮೌಲ್ಯ ವರ್ಧಿತ ತೆರಿಗೆಯನ್ನು (ವ್ಯಾಟ್‌) ಕಡಿತಗೊಳಿಸಿವೆ.

ಮಂಗಳವಾರ ರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದ್ದು, ಎರಡೂ ರಾಜ್ಯಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಅಗ್ಗವಾಗಿದೆ.

ಗುಜರಾತ್‌ ಸರ್ಕಾರದ ನಿರ್ಧಾರ ಹೊರಬಿದ್ದ ಬೆನ್ನಲ್ಲೇ ಮಹಾರಾಷ್ಟ್ರ ಕೂಡ ಪೆಟ್ರೋಲ್‌, ಡೀಸೆಲ್‌ ಮೇಲಿನ ವ್ಯಾಟ್‌ ಕಡಿತಗೊಳಿಸುವುದಾಗಿ ಪ್ರಕಟಿಸಿದೆ. ಆದರೆ, ಎಷ್ಟು ಪ್ರಮಾಣದಲ್ಲಿ ವ್ಯಾಟ್‌ ಕಡಿತ ಮಾಡಲಿದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಶೇ 4ರಷ್ಟು ವ್ಯಾಟ್‌ ಕಡಿತ ಮಾಡಿರುವುದಾಗಿ ಮುಖ್ಯಮಂತ್ರಿ ವಿಜಯಭಾಯಿ ರೂಪಾಣಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT