ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈನಾ ಸಂತ್ರಸ್ತ ಕನ್ನಡಿಗರಿಗೆ ನಿವೇಶನ: ಸಿದ್ದರಾಮಯ್ಯ

Last Updated 10 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗೋವಾದ ಬೈನಾ ಬೀಚ್‌ನಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಬೈನಾ ಬೀಚ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದಾರೆಂದು ಕನ್ನಡಿಗರಿಗೆ ಸೇರಿದ ಸುಮಾರು 55 ಮನೆಗಳನ್ನು ಗೋವಾ ಸರ್ಕಾರ ಇತ್ತೀಚೆಗೆ ತೆರವುಗೊಳಿಸಿತ್ತು.

ಬೈನಾ ಬೀಚ್‌ನಲ್ಲಿ ಮನೆಗಳನ್ನು ಕಳೆದುಕೊಂಡು ಸಂತ್ರಸ್ತರಾದ ಕನ್ನಡಿಗರ ಸಂಖ್ಯೆ ಎಷ್ಟು, ಎಲ್ಲರಿಗೂ ನಿವೇಶನ ಒದಗಿಸಲು ಅಗತ್ಯವಾದ ಭೂಮಿ ಮುಂತಾದ ವಿಷಯಗಳ ಕುರಿತು ಮೂರು ದಿನಗಳಲ್ಲಿ ಸಮಗ್ರ ವರದಿ ನೀಡುವಂತೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

‘ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಮೊದಲ ಹಂತದಲ್ಲಿ ಅವರಿಗೆ ನಿವೇಶನದ ಒದಗಿಸುವ ವ್ಯವಸ್ಥೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ತಿಳಿಸಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಮುಖ್ಯ ಕಾರ್ಯದರ್ಶಿ ಸುಭಾಷ್‌ ಚಂದ್ರ ಖುಂಟಿಆ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್,  ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT