ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯ್ಕೆ ಭಾಷೆಯಲ್ಲಿಯೇ ಮಧ್ಯಂತರ ಪರೀಕ್ಷೆ

Last Updated 10 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪಿಯು ವಿದ್ಯಾರ್ಥಿಗಳು ತಾವು ಆಯ್ಕೆ ಮಾಡಿಕೊಂಡ ಮಾಧ್ಯಮದಲ್ಲಿಯೇ ಮಧ್ಯಂತರ ಪರೀಕ್ಷೆ ಬರೆಯಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಇದೇ ಶೈಕ್ಷಣಿಕ ವರ್ಷದ ಪರೀಕ್ಷೆಯನ್ನು ಕನ್ನಡ ಅಥವಾ ಇಂಗ್ಲಿಷ್‌ ಮಾಧ್ಯಮದಲ್ಲಿ ಬರೆಯುವುದನ್ನು ಆಯ್ಕೆ ಮಾಡಿಕೊಳ್ಳಲು ಮೊದಲೇ ಸೂಚಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಅಭ್ಯಾಸವಾಗಲಿ ಎಂಬ ದೃಷ್ಟಿಯಿಂದ ಮಧ್ಯಂತರ ಪರೀಕ್ಷೆಯನ್ನೂ ಅದೇ ರೀತಿ ನಡೆಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಮಾಧ್ಯಮದಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಮುದ್ರಿಸಿ, ವಿತರಿಸುವಂತೆ ಸೂಚಿಸಲಾಗಿದೆ ಎಂದು ಇಲಾಖೆ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT