ಚೆನ್ನಮ್ಮನ ಖಡ್ಗ ಮರಳಿ ತರಲು ಒತ್ತಾಯ

ಭಾನುವಾರ, ಜೂನ್ 16, 2019
30 °C

ಚೆನ್ನಮ್ಮನ ಖಡ್ಗ ಮರಳಿ ತರಲು ಒತ್ತಾಯ

Published:
Updated:

ಬಾಗಲಕೋಟೆ: ಕಿತ್ತೂರು ರಾಣಿ ಚನ್ನಮ್ಮಾ ಅವರ ಜಯಂತಿ ಆಚರಣೆಯ ಪ್ರಯುಕ್ತ ಇದೇ 12 ರಂದು ಬೆಂಗಳೂರಿನಲ್ಲಿ ಸಚಿವ ವಿನಯ ಕುಲಕರ್ಣಿ ಅವರ ಮನೆಯಲ್ಲಿ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ಸಚಿವರ ನಿವಾಸದಲ್ಲಿ ಅಂದು ಮಧ್ಯಾಹ್ನ 3 ಗಂಟೆಗೆ ಪೂರ್ವಭಾವಿ ಸಭೆ ಜರುಗಲಿದೆ. ಜಿಲ್ಲೆ, ತಾಲ್ಲೂಕು ಘಟಕಗಳ ಅಧ್ಯಕ್ಷರು ಹಾಗೂ ಸಮಾಜದ ಪ್ರತಿನಿಧಿಗಳು ಸಭೆಗೆ ಬರುವಂತೆ ಕೋರಿದರು.

ಸರ್ಕಾರಕ್ಕೆ ಅಭಿನಂದನೆ: ‘ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಇದೇ 23 ರಂದು ರಜಾ ರಹಿತ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕಾರ್ಯ ಅಭಿನಂದನೀಯ’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚೆನ್ನಮ್ಮ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವಂತೆ ಹಲವು ಬಾರಿ ಬೇಡಿಕೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಬೇಡಿಕೆಗೆ ಸ್ಪಂದಿಸಿದೆ ಎಂದರು.

ರಾಜ್ಯಾದ್ಯಂತ ಎಲ್ಲ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಸ್ಥಳೀಯಾಡಳಿತದ ಜೊತೆಗೆ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಖಡ್ಗವನ್ನು ಮರಳಿ ತರಲು ಸರ್ಕಾರ ಮುಂದಾಗಬೇಕು. ಪಂಚಮಸಾಲಿ ಸಮುದಾಯ ಚೆನ್ನಮ್ಮನ ಆದರ್ಶಗಳನ್ನು ಅಳವಡಿಸಿಕೊಂಡಿದೆ. ಝಾನ್ಸಿ ರಾಣಿ ಲಕ್ಷ್ಮಿಬಾಯಿಗೆ ದೊರೆತ ಸ್ಥಾನಮಾನಗಳು ಇದುವರೆಗೂ ಚೆನ್ನಮ್ಮನಿಗೆ ದೊರೆಯದಿರುವುದು ದುರ್ದೈವದ ಸಂಗತಿಯಾಗಿದೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry