ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೈದಾನದ ಕಾಮಗಾರಿ ಪೂರ್ಣಗೊಳಿಸಿ’

Last Updated 11 ಅಕ್ಟೋಬರ್ 2017, 5:24 IST
ಅಕ್ಷರ ಗಾತ್ರ

ಅಥಣಿ: ತಾಲ್ಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆಟದ ಮೈದಾನ ಸಂಪೂರ್ಣ ಹಾಳಗಿದ್ದು ವಿದ್ಯಾರ್ಥಿಗಳಿಗೆ ಆಟದ ಮೈದಾನ ಇಲ್ಲದಂತಾಗಿದೆ.
‘ಗ್ರಾಮ ಪಂಚಾಯ್ತಿ ಮೈದಾನ ಅಭಿವೃದ್ಧಿ ಕಾಮಗಾರಿ ಕೈಗೊಡಿತ್ತು. ಆದರೆ ಅನುದಾನದ ಕೊರತೆಯ ನೆಪ ಹೇಳಿ ಕಾಮಗಾರಿ ಪೂರ್ಣಗೊಳಿಸದೆ ಅರ್ಧಕ್ಕೆ ನಿಲ್ಲಿಸಲಾಗಿದೆ.

ಮಳೆಯಾದರೆ ಶಾಲೆಯ ಸುತ್ತಲಿನ ಹೊಲಗಳಿಂದ ಹರಿದು ಬರುವ ನೀರು ಮೈದಾನದಲ್ಲಿ ನಿಲ್ಲುತ್ತಿದೆ. ಈ ಕುರಿತು ಗ್ರಾಮ ಪಂಚಾಯ್ತಿ ಅಧ್ಯಕ್ಷರಿಗೆ ಹಾಗೂ ಎಸ್‌ಡ.ಡಿ.ಎಂ.ಸಿ ಅಧ್ಯಕ್ಷರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥ ಸುರೇಶ ತಾಕತರಾವ ಅವರು ಆರೋಪಿಸಿದ್ದಾರೆ.

‘ವಿದ್ಯಾರ್ಥಿಗಳ ಕ್ರೀಡಾಭ್ಯಾಸಕ್ಕೆ ತೊಂದರೆಯಾಗುತ್ತಿದ್ದು ತಕ್ಷಣವೇ ಕಾಮಗಾರಿಯನ್ನು ಪೂರ್ಣಗೊಳಿಸ ಬೇಕು. ಸ್ಥಳೀಯ ಆಡಳಿತಾಧಿಕಾರಿಗಳು ಶಾಲೆಗೆ ಮೂಲಸೌಲಭ್ಯಗಳನ್ನು ಒದಗಿಸಲು ಮುದಾಗಬೇಕು’ ಎಂದರು.

‘ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಸರ್ಕಾರದಿಂದ ಅನುದಾನ ಮಂಜೂರಾದ ತಕ್ಷಣ ಕಾಮಗಾರಿಯನ್ನು ಪ್ರಾರಂಭಿಸ ಲಾಗುತ್ತದೆ’ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕಮಲವ್ವಾ ಮುರಗುಂಡಿ ಅವರು ಭರವಸೆ ನೀಡದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT