53 ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಶನಿವಾರ, ಮೇ 25, 2019
22 °C

53 ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Published:
Updated:
53 ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಭಾಲ್ಕಿ: ತಾಲ್ಲೂಕಿನ ಲಖಣಗಾಂವ ಗ್ರಾಮದಲ್ಲಿ ವಾಂತಿಭೇದಿ ಕಾಣಿಸಿಕೊಂಡು 53ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ಭಾನುವಾರ ರಾತ್ರಿ ಗ್ರಾಮದಲ್ಲಿ ನಡೆದ ಧಾರ್ಮಿಕ ಪ್ರಾರ್ಥನಾ ಕಾರ್ಯಕ್ರಮದಲ್ಲಿ ವಿತರಿಸಲಾದ ಕಡಲೆ ಬೀಜದಿಂದ ತಯಾರಿಸಿದ (ಉಸುಳೆ) ಪ್ರಸಾದ ಸೇವನೆಯೇ ವಾಂತಿಭೇದಿಗೆ ಕಾರಣ ಎಂದು ಹೇಳಲಾಗುತ್ತಿದೆ.

ಮಂಗಳವಾರ ವಾಂತಿಭೇದಿ ಪ್ರಕರಣದಿಂದ ಬಳಲುತ್ತಿರುವ ಸಂಖ್ಯೆ ಹೆಚ್ಚಾಗಿದ್ದು, ಮಕ್ಕಳು, ಮಹಿಳೆಯರು ಸೇರಿ 53 ಜನರು ಅಸ್ವಸ್ಥಗೊಂಡಿದ್ದಾರೆ. 19 ರೋಗಿಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಉಳಿದ 34 ರೋಗಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ವಾಂತಿಭೇದಿ ಪ್ರಕರಣ ಬೆಳಕಿಗೆ ಬರುತ್ತಲೆ ಆರೋಗ್ಯ ಇಲಾಖೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ.ಜಬ್ಬಾರ್ ನೇತೃತ್ವದ ವೈದ್ಯರ ತಂಡ ಭಾಲ್ಕಿಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry