ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ವರ್ಷದೊಳಗಿನ ಪತ್ನಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದುವುದು ಅತ್ಯಾಚಾರ: ಸುಪ್ರೀಂ ಕೋರ್ಟ್‌

Last Updated 11 ಅಕ್ಟೋಬರ್ 2017, 6:20 IST
ಅಕ್ಷರ ಗಾತ್ರ

ನವದೆಹಲಿ: ಪತ್ನಿಯ ವಯಸ್ಸು ಹದಿನೆಂಟು ವರ್ಷಕ್ಕಿಂತ ಕಡಿಮೆ ಇದ್ದು, ಆಕೆಯೊಂದಿಗೆ ಪತಿ ಲೈಂಗಿಕ ಸಂಪರ್ಕ ಹೊಂದಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಮದುವೆ ನಂತರ ಪತಿಯು ಪತ್ನಿಯ ಮೇಲೆ ನಡೆಸುವ ಅತ್ಯಾಚಾರ ಅಪರಾಧ ಎಂದು ಘೋಷಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ಬುಧವಾರ ಈ ಆದೇಶ ನೀಡಿದೆ.

ಹದಿನೈದರಿಂದ ಹದಿನೆಂಟು ವರ್ಷದೊಳಗಿನ ಪತ್ನಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದರೆ ಐಪಿಸಿ ಅಡಿ ಶಿಕ್ಷಾರ್ಹ ಅಪರಾಧ. ಅಪ್ರಾಪ್ತ ವಯಸ್ಸಿನ ಪತ್ನಿಯು ಲೈಂಗಿಕ ಸಂಪರ್ಕ ಹೊಂದಿದ ಕುರಿತು ಒಂದು ವರ್ಷದೊಳಗೆ ದೂರು ದಾಖಲಿಸಿದರೆ ಪತಿ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ನ್ಯಾಯಮೂರ್ತಿ ಮದನ್‌ ಬಿ ಲೋಕೂರ್‌ ಹಾಗೂ ನ್ಯಾ.ದೀಪಕ್‌ ಗುಪ್ತಾ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ.

ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್‌ 375 ಪ್ರಕಾರ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದುವುದು ಅತ್ಯಾಚಾರವೆನಿಸುತ್ತದೆ. ಆದರೆ, 15 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯೊಂದಿಗೆ ಆಕೆಯ ಪತಿ ಲೈಂಗಿಕ ಸಂಪರ್ಕ ಹೊಂದಿದರೆ(ಆಕೆಯ ಒಪ್ಪಿಗೆ ಇಲ್ಲದೆಯೂ) ಅದು ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ.

ಇದರಿಂದಾಗಿ ಪುರುಷ 15–18 ವರ್ಷದೊಳಗಿನ ತನ್ನ ಪತ್ನಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸುವುದು ಅಥವಾ ಅತ್ಯಾಚಾರ ಎಸಗುವುದು ಅಪರಾಧವಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT