ಮೋದಿ ಸರ್ಕಾರ ಪ್ರಜಾಪ್ರಭುತ್ವದ ವಿರೋಧಿ’

ಮಂಗಳವಾರ, ಜೂನ್ 25, 2019
24 °C

ಮೋದಿ ಸರ್ಕಾರ ಪ್ರಜಾಪ್ರಭುತ್ವದ ವಿರೋಧಿ’

Published:
Updated:
ಮೋದಿ ಸರ್ಕಾರ ಪ್ರಜಾಪ್ರಭುತ್ವದ ವಿರೋಧಿ’

ಮಳವಳ್ಳಿ: ಪ್ರಧಾನಮಂತ್ರಿ ನರೇಂದ್ರಮೋದಿ ಸಂಘಪರಿವಾರದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ನಾಶ ಪಡಿಸಿ ಸರ್ವಾಧಿಕಾರಿ ಆಡಳಿತ ನಡೆಸುವತ್ತ ಮುಂದಾಗಿದ್ದಾರೆ ಎಂದು ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಎನ್.ಮಹೇಶ್ ಆರೋಪಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಮಂಗಳವಾರ ಬಿಎಸ್‌ಪಿ ಸಂಸ್ಥಾಪಕ ಕಾನ್ಷಿರಾಂ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆದ ನಂತರ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್ ಷಾ ಅವರು ವಿರೋಧ ಪಕ್ಷಗಳು ಅಪ್ರಸ್ತುತ ಎನ್ನುವಂತೆ ಮಾತನಾಡಿದ್ದಾರೆ, ಆದರೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಆಡಳಿತ ನಡೆಸುವ ಸರ್ಕಾರಕ್ಕೆ ಪ್ರಬಲವಾದ ವಿರೋಧ ಪಕ್ಷವೂ ಇರಬೇಕೆಂಬುದನ್ನು ಪ್ರತಿಪಾದಿಸಿದ್ದಾರೆ. ಇಲ್ಲಿ ಬಿಜೆಪಿಯವರು ವಿರೋಧಪಕ್ಷಗಳನ್ನೇ ನಾಶ ಮಾಡಲು ಹೊರಟಿದ್ದಾರೆ. ಮತದಾರರು ಇದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಇಂಗ್ಲಿಷ್‌ ಭಾಷೆಯ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳು ಮೋದಿ ಅವರನ್ನು ಮಹಾನಾಯಕ ಎಂಬಂತೆ ಬಿಂಬಿಸುತ್ತಿವೆ. ಆದರೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಜಾರಿಗೊಳಿಸದೆ ಹೇಗೆ ಮಹಾನ್ ನಾಯಕರಾಗುತ್ತಾರೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು.

ನೋಟು ರದ್ಧತಿಯಿಂದ ಸಂಘಟಿತ ವಲಯದಲ್ಲಿ ಎರಡು ಕೋಟಿ ಉದ್ಯೋಗ ರದ್ಧುಗೊಂಡಿವೆ, ಕಪ್ಪು ಹಣ ಎಂಬುದು ಬಾಯಿಮಾತಿನಲ್ಲೇ ಪ್ರಚಾರ ನಡೆಯಿತೇ ಹೊರತು ದೇಶದ ಆರ್ಥಿಕತೆಗೆ ಯಾವ ಪ್ರಯೋಜನವೂ ಆಗಿಲ್ಲ. ಇದರ ಬಗ್ಗೆ ಆರ್‌ಬಿಐ ಮಾಜಿ ಗೌವರ್ನರ್ ರಂಗರಾಜನ್ ಸಹ ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಮುಂಬರುವ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ಬಿಎಸ್‌ಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು ಇಡೀ ರಾಜ್ಯದಲ್ಲಿ 12 ಶಾಸಕರು ಆಯ್ಕೆಯಾಗುವ ವಿಶ್ವಾಸವಿದ್ದು ಪ್ರಬಲ ವಿರೋಧ ಪಕ್ಷವಾಗಿ ಹೋರಾಟ ನಡೆಸಲು ಮತದಾರರು ಅವಕಾಶ ನೀಡಬೇಕು.

ಒಂದೇ ಪಕ್ಷ ಆಡಳಿತ ನಡೆಸುತ್ತಿರುವುದರಿಂದ ಯಾವುದೇ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಅತಂತ್ರ ವಿಧಾನಸಭೆ ಆಡಳಿತ ಬರಬೇಕು ಎಂದು ಅಭಿಪ್ರಾಯಪಟ್ಟರು.

ನ.26 ರಂದು ಬಿಎಸ್ಪಿ ರಾಷ್ಟ್ರೀಯ ಘಟಕದ ಅಧ್ಯಕ್ಷೆ ಮಾಯಾವತಿ ಬೆಂಗಳೂರಿಗೆ ಬರುತ್ತಿದ್ದು, ಅಂದು ₹ 25,000 ಪದಾಧಿಕಾರಿಗಳ ಸಮಾವೇಶ ನಡೆಸಲಾಗುವುದು ಇದಕ್ಕೆ ಪೂರಕವಾಗಿ ಸ್ಥಳೀಯ ಮಟ್ಟದ ಎಲ್ಲಾ ಪದಾಧಿಕಾರಿಗಳು ಹಾಜರಾಗಬೇಕು ಎಂದು ಸಲಹೆ ನೀಡಿದರು. ಬಿಎಸ್‌ಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯವರಾದ ಬಿ.ಕೃಷ್ಣಮೂರ್ತಿ, ಸಿದ್ದಯ್ಯ, ಕೃಷ್ಣ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry