ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಡಿ ಬಿದ್ದ ನಾರಾಯಣಪ್ಪನ ಕೆರೆ

Last Updated 11 ಅಕ್ಟೋಬರ್ 2017, 9:23 IST
ಅಕ್ಷರ ಗಾತ್ರ

ಕನಕಪುರ: ನಗರದ ಹೌಸಿಂಗ್‌ ಬೋರ್ಡ್‌ ಬಡಾವಣೆಯ ಕಾನಕಾನಹಳ್ಳಿಯ ಉದ್ಯಾನವನದ ನಾರಾಯಣಪ್ಪನ ಕೆರೆಯು ಮಳೆಯ ನೀರಿಗೆ ತುಂಬಿ ಕೋಡಿ ಬಿದ್ದಿರುವುದಕ್ಕೆ ಪಟ್ಟಣದ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕೆರೆಯನ್ನು ಅಭಿವೃದ್ಧಿಗೊಳಿಸಿ ಸುಸಜ್ಜಿತವಾದ ಉದ್ಯಾನವನ ಮಾಡಬೇಕೆಂದು ಜನರಿಗೆ ಮಹದಾಸೆಯಿತ್ತು. ಅಂತಹ ಆಸೆಗೆ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಡಿ.ಕೆ.ಸುರೇಶ್‌ ಅವರು ಕೆರೆಯನ್ನು ಅಭಿವೃದ್ಧಿ ಪಡಿಸುವ ಮೂಲಕ ಜನರ ಭಾವನೆಗೆ ಸ್ಪಂದಿಸಿದ್ದರು.

ಅವರ ಪ್ರಯತ್ನದ ಫಲವಾಗಿ ಕೆರೆ ಅಭಿವೃದ್ಧಿ ಕಾರ್ಯ ನಡೆದಿದೆ. ಈ ನಡುವೆ ಭಾರಿ ಮಳೆಗೆ ಕೆರೆಯು ಪೂರ್ಣ ತುಂಬಿ ಕೋಡಿಬಿದ್ದಿದೆ. ಬೆಂಗಳೂರು ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಕೆರೆ ಇರುವುದರಿಂದ ನೋಡುಗರ ಮನಸ್ಸನ್ನು ಆಕರ್ಷಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT