ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುಕುಲ್ ರಾಯ್

Last Updated 11 ಅಕ್ಟೋಬರ್ 2017, 14:31 IST
ಅಕ್ಷರ ಗಾತ್ರ

ನವದೆಹಲಿ: ತೃಣಮೂಲ ಕಾಂಗ್ರೆಸ್ ಮಾಜಿ ಸಂಸದ ಮುಕುಲ್ ರಾಯ್ ಅವರು ಬುಧವಾರ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ  ನೀಡಿದ್ದಾರೆ.

ಮುಕುಲ್ ರಾಯ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಸಲ್ಲಿಸಿದ್ದಾರೆ. ಇದರ ಜತೆಗೆ ತೃಣಮೂಲ ಕಾಂಗ್ರೆಸ್ ನೀಡಿದ ಸ್ಥಾನಗಳಿಗೂ ವಿದಾಯ ಹೇಳಿದ್ದು, ಮುಂದಿನ ನಡೆ ಬಗ್ಗೆ ರಹಸ್ಯ ಕಾಯ್ದುಕೊಂಡಿದ್ದಾರೆ. 

‘ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ನನ್ನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ’ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ರಾಜೀನಾಮೆ ಸಲ್ಲಿಸಿದ ಬಳಿಕ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಯ್ ಅವರು, ’ನಾನು ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕೆಲವು ದಿನಗಳ ಕಾಲ ರಜೆ ಮೇಲೆ ತೆರಳುತ್ತಿದ್ದೇನೆ.ಮರಳಿ ಬಂದ ಬಳಿಕ ಮುಂದಿನ ಭವಿಷ್ಯದ ಬಗ್ಗೆ ನಿರ್ಧರಿಸುತ್ತೇನೆ’ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂಬ ಆರೋಪದಡಿಯಲ್ಲಿ ರಾಯ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT