ಶುಕ್ರವಾರ, ಸೆಪ್ಟೆಂಬರ್ 20, 2019
25 °C
ಪ್ರಕಾಶ್‌ ಜಾವಡೇಕರ್‌ ಹೇಳಿಕೆ

ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕರಿಗೆ 7ನೇ ವೇತನ ಆಯೋಗದ ಶಿಫಾರಸು ಅನ್ವಯ

Published:
Updated:
ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕರಿಗೆ 7ನೇ ವೇತನ ಆಯೋಗದ ಶಿಫಾರಸು ಅನ್ವಯ

ನವದೆಹಲಿ: ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕರಿಗೆ 7ನೇ ವೇತನ ಆಯೋಗದ ಶಿಫಾರಸುಗಳು 2016ರ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಯಾಗಲಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘329 ರಾಜ್ಯ ವಿಶ್ವವಿದ್ಯಾಲಯಗಳು ಮತ್ತು 12,912 ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು ಮತ್ತು ಸಹ ಪ್ರಾಧ್ಯಾಪಕರಿಗೆ 7ನೇ ವೇತನ ಆಯೋಗದ ಶಿಫಾರಸುಗಳು ಅನ್ವಯವಾಗಲಿವೆ’ ಎಂದಿದ್ದಾರೆ.

‘ಸರ್ಕಾರದ ಈ ನಿರ್ಧಾರದಿಂದ 7.51 ಲಕ್ಷ ಬೋಧಕ ಸಿಬ್ಬಂದಿ 7ನೇ ವೇತನ ಆಯೋಗದ ಸಲವತ್ತುಗಳನ್ನು ಪಡೆಯಲಿದ್ದಾರೆ. ಪ್ರತಿಭಾವಂತರನ್ನು ಶಿಕ್ಷಣ ಕ್ಷೇತ್ರದ ಕಡೆಗೆ ಆಕರ್ಷಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.

Post Comments (+)