ಮಹಿಳೆಗೆ ಅವಕಾಶ...

ಬುಧವಾರ, ಜೂನ್ 19, 2019
31 °C

ಮಹಿಳೆಗೆ ಅವಕಾಶ...

Published:
Updated:

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನವೆಂಬರ್‌ನಲ್ಲಿ ನಡೆಸಲು ನಿರ್ಧರಿತವಾಗಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಾಡಿನ ಖ್ಯಾತ ಕವಿ, ಕನ್ನಡ ಪರ ಹೋರಾಟಗಾರ ಚಂಪಾ ಆಯ್ಕೆ ಸ್ವಾಗತಾರ್ಹ. ಪಾಟೀಲರಿಗೂ ಅವರನ್ನು ಆಯ್ಕೆ ಮಾಡಿದ ಪರಿಷತ್ತಿಗೂ ಅಭಿನಂದನೆಗಳು.

ಮುಂದೆ ಡಿಸೆಂಬರ್‌ ತಿಂಗಳಲ್ಲಿ ದಾವಣಗೆರೆಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಾಡಿನ ಮಹಿಳೆಯೊಬ್ಬರನ್ನು ಆಯ್ಕೆ ಮಾಡಬೇಕಾದ್ದು ಸರ್ಕಾರದ ಕರ್ತವ್ಯವಾಗಿದೆ. ಇದುವರೆಗಿನ ವಿಶ್ವ ಕನ್ನಡ ಸಮ್ಮೇಳನಗಳಲ್ಲಿ ಎಂದೂ ಮಹಿಳೆ ಅಧ್ಯಕ್ಷರಾಗಿಲ್ಲ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವೂ ಮಹಿಳೆಗೆ ಬೆರಳೆಣಿಕೆಯಷ್ಟು ಬಾರಿ ಮಾತ್ರ ದಕ್ಕಿದೆ.

-ಕಲ್ಪನಾ ಎಂ., ಮೈಸೂರು

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry