‘ರಾಹುಲ್‌ಗೆ ಬಿಜೆಪಿ ನಾಯಕಿಯರ ಭಯ’

ಭಾನುವಾರ, ಜೂನ್ 16, 2019
32 °C

‘ರಾಹುಲ್‌ಗೆ ಬಿಜೆಪಿ ನಾಯಕಿಯರ ಭಯ’

Published:
Updated:
‘ರಾಹುಲ್‌ಗೆ ಬಿಜೆಪಿ ನಾಯಕಿಯರ ಭಯ’

ಬಲಿಯಾ (ಉತ್ತರ ಪ್ರದೇಶ): ಆರ್‌ಎಸ್‌ಎಸ್‌ನಲ್ಲಿ ಎಷ್ಟು ಮಹಿಳೆಯರಿದ್ದಾರೆ ಎಂದು ಕೇಳಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಮುಖಂಡ ಶಹನವಾಜ್‌ ಹುಸೇನ್‌, ರಾಹುಲ್‌ ಅವರು ಬಿಜೆಪಿಯ ಮಹಿಳಾ ಮುಖಂಡರ ಬಗ್ಗೆ ಭಯ ಹೊಂದಿದ್ದಾರೆ ಎಂದು ಹೇಳಿದ್ದಾರೆ.

‘ಬಿಜೆಪಿಯಲ್ಲಿ ಮಹಿಳೆಗೆ ಹೆಚ್ಚಿನ ಗೌರವವಿದೆ. ಉತ್ತರ ಪ್ರದೇಶದಲ್ಲಿ ಪಕ್ಷವು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕಿಯರನ್ನು ಹೊಂದಿದೆ’ ಎಂದು ಅವರು ಹೇಳಿದ್ದಾರೆ.

‘ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗಳನ್ನು ಅರ್ಥ ಮಾಡಿಕೊಳ್ಳಲು ರಾಹುಲ್‌ ಗಾಂಧಿ ಅವರು ಇನ್ನಷ್ಟು ಸಮಯ ತೆಗೆದುಕೊಳ್ಳಬೇಕು. ಅದಕ್ಕಾಗಿ ಅವರು ಅಧ್ಯಯನ ನಡೆಸಬೇಕು’ ಎಂದು ಹುಸೇನ್‌ ಹೇಳಿದ್ದಾರೆ.

ವಡೋದರಾದಲ್ಲಿ ಮಂಗಳವಾರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್‌ ಗಾಂಧಿ, ‘ಬಿಜೆಪಿಯ ಸಂಘಟನೆಯಾದ ಆರ್‌ಎಸ್‌ಎಸ್‌ನಲ್ಲಿ ಎಷ್ಟು ಮಹಿಳೆಯರಿದ್ದಾರೆ? ಚೆಡ್ಡಿ ಹಾಕಿಕೊಂಡು ಶಾಖೆಗಳಲ್ಲಿ ಭಾಗವಹಿಸುವ ಮಹಿಳೆಯರನ್ನು ನೀವು ಯಾರಾದರೂ ನೋಡಿದ್ದೀರಾ? ನಾನು ನೋಡಿಲ್ಲ’ ಎಂದು ಹೇಳಿದ್ದರು.

ಕಾಂಗ್ರೆಸ್‌ ಮುಖಂಡ ಬಳಸಿರುವ ಭಾಷೆ ‘ದುರದೃಷ್ಟಕರ’ವಾದುದು ಎಂದು ಹೇಳಿರುವ ಶಹನವಾಜ್‌ ಹುಸೇನ್‌, ಅವರು ಎಲ್ಲ ಮಿತಿಗಳನ್ನೂ ಮೀರಿದ್ದಾರೆ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry