7 ಕಾರುಗಳ ಗಾಜು ಒಡೆದ ದುಷ್ಕರ್ಮಿಗಳು

ಬುಧವಾರ, ಜೂನ್ 19, 2019
30 °C

7 ಕಾರುಗಳ ಗಾಜು ಒಡೆದ ದುಷ್ಕರ್ಮಿಗಳು

Published:
Updated:
7 ಕಾರುಗಳ ಗಾಜು ಒಡೆದ ದುಷ್ಕರ್ಮಿಗಳು

ಬೆಂಗಳೂರು: ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ರಸ್ತೆ ಬದಿ ನಿಲ್ಲಿಸಿದ 7 ಕಾರುಗಳ ಗಾಜುಗಳನ್ನು ದುಷ್ಕರ್ಮಿಗಳಿಬ್ಬರು ಮಚ್ಚಿನಿಂದ ಒಡೆದಿದ್ದಾರೆ.

ರಾತ್ರಿ 1.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ತ್ಯಾಗರಾಜನಗರದ ದತ್ತಾತ್ರೇಯ ದೇವಸ್ಥಾನದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಒಡೆದಿದ್ದಾರೆ. ಅವರನ್ನು ಹಿಡಿಯಲು ಯತ್ನಿಸಿದಾಗ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ ಎಂದು ಜಖಂಗೊಂಡ ಕಾರಿನ ಮಾಲೀಕರೊಬ್ಬರು ತಿಳಿಸಿದರು.

‘ಯಾವ ಕಾರಣಕ್ಕೆ ಕಾರುಗಳನ್ನು ಒಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಮೇಲ್ನೋಟಕ್ಕೆ ಪುಂಡಾಟಿಕೆ ನಡೆಸಲು ಈ ಕೃತ್ಯ ಎಸಗಿದ್ದಾರೆ ಎಂದು ಗೊತ್ತಾಗಿದೆ. ದುಷ್ಕರ್ಮಿಗಳ ಕೃತ್ಯದ ದೃಶ್ಯಾವಳಿಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹನುಮಂತನಗರ ಠಾಣೆಗೆ ದೂರು ನೀಡಿದ್ದೇವೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry