ರೇಸ್‌ಕೋರ್ಸ್‌ ಪರವಾನಗಿ ನವೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

ಗುರುವಾರ , ಮೇ 23, 2019
31 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ರೇಸ್‌ಕೋರ್ಸ್‌ ಪರವಾನಗಿ ನವೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

Published:
Updated:
ರೇಸ್‌ಕೋರ್ಸ್‌ ಪರವಾನಗಿ ನವೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ರೇಸ್‌ಕೋರ್ಸ್‌ ಪರವಾನಗಿ ನವೀಕರಣ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರೇಸ್‌ಕೋರ್ಸ್‌ನ ನೂರಾರು ಗುತ್ತಿಗೆ ಸಿಬ್ಬಂದಿ ಬುಧವಾರ ಪ್ರತಿಭಟನೆ ನಡೆಸಿದರು.

ಪರವಾನಗಿ ನವೀಕರಿಸದ ಕಾರಣಕ್ಕೆ ರೇಸ್‌ಕೋರ್ಸ್‌ನ ಕಾರ್ಯಚಟುವಟಿಕೆಗಳು 45 ದಿನಗಳಿಂದ ಸ್ಥಗಿತಗೊಂಡಿವೆ. ಹೀಗಾಗಿ, ಸುಮಾರು 1,500 ಗುತ್ತಿಗೆ ಕಾರ್ಮಿಕರನ್ನು ತಾತ್ಕಾಲಿಕವಾಗಿ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಪ್ರತಿಭಟನಾಕಾರರೊಬ್ಬರು ತಿಳಿಸಿದರು.

‘ಪರವಾನಗಿ ಕೋರಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದೇವೆ. ರೇಸ್‌ನಲ್ಲಿ ಪ್ರಶಸ್ತಿ ಜಯಿಸಿದ್ದ ‘ಕ್ವೀನ್‌ ಲತೀಫಾ’ ಕುದುರೆಗೆ ಉದ್ದೀಪನಾ ಮದ್ದು ನೀಡಲಾಗಿತ್ತು ಎಂಬ ಆರೋಪ ಸಂಬಂಧ ಸಿಐಡಿಯಿಂದ ವರದಿ ಬಂದ ಬಳಿಕ ಪರವಾನಗಿ ನೀಡುವ ಬಗ್ಗೆ ಪರಿಶೀಲಿಸುವುದಾಗಿ ಸರ್ಕಾರ ಹೇಳುತ್ತಿದೆ ಎಂದು ರೇಸ್‌ಕೋರ್ಸ್‌ ಅಧಿಕಾರಿಗಳು ಹೇಳುತ್ತಿದ್ದಾರೆ. ವರದಿ ನೀಡುವವರೆಗೆ ನಮ್ಮ ಹೊಟ್ಟೆಪಾಡೇನು’ ಎಂದು ಕಾರ್ಮಿಕರೊಬ್ಬರು ಪ್ರಶ್ನಿಸಿದರು.

‘ರೇಸ್‌ಕೋರ್ಸ್‌ನಲ್ಲಿ ತಾಂತ್ರಿಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದೇನೆ. ಈ ಕೆಲಸ ಬಿಟ್ಟು ಬೇರೆ ಕೆಲಸ ನನಗೆ ಗೊತ್ತಿಲ್ಲ. ಪತ್ನಿಯೂ ಇಲ್ಲಿಯೇ ಕೆಲಸ ಮಾಡುತ್ತಿದ್ದಾಳೆ. ಸುಮಾರು ಎರಡು ತಿಂಗಳಿನಿಂದ ದುಡಿಮೆಯಿಲ್ಲದೆ ಕಷ್ಟವಾಗಿದೆ’ ಎಂದು ಕೆ.ವಿಜಯ್ ಅಳಲು ತೋಡಿಕೊಂಡರು.

‘ಒಂದು ವೇಳೆ ತನಿಖಾ ವರದಿ ನೀಡಿದ ಬಳಿಕ ಪರವಾನಗಿ ನೀಡುವುದಾದರೆ, ಅಲ್ಲಿಯವರೆಗೆ ಸರ್ಕಾರವೇ ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry