ಬಾಲಕಿ ಮೇಲೆ ಅತ್ಯಾಚಾರ: ಮಲತಂದೆ ಬಂಧನ

ಸೋಮವಾರ, ಜೂನ್ 24, 2019
30 °C

ಬಾಲಕಿ ಮೇಲೆ ಅತ್ಯಾಚಾರ: ಮಲತಂದೆ ಬಂಧನ

Published:
Updated:
ಬಾಲಕಿ ಮೇಲೆ ಅತ್ಯಾಚಾರ: ಮಲತಂದೆ ಬಂಧನ

ಬೆಂಗಳೂರು: 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಆಕೆಯ ಮಲತಂದೆಯನ್ನು ಜೀವನ್‌ಬಿಮಾನಗರ ಪೊಲೀಸರು ಬಂಧಿಸಿದ್ದಾರೆ.

ಆನೇಕಲ್‌ ನಿವಾಸಿಯಾದ ಆರೋಪಿ, ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಮೊದಲ ಪತಿಯಿಂದ ಪ್ರತ್ಯೇಕವಾಗಿದ್ದ ಸಂತ್ರಸ್ತೆಯ ತಾಯಿ, ಆರೋಪಿಯನ್ನು 2ನೇ ಮದುವೆಯಾಗಿದ್ದರು. ನಂತರ ಎಲ್ಲರೂ ಜೀವನ್‌ಬಿಮಾನಗರದಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅ.6ರಂದು ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದರಿಂದ ಬಾಲಕಿ ಒಬ್ಬಳೇ ಮನೆಯಲ್ಲಿದ್ದಳು. ಈ ವೇಳೆ ಬೇಕರಿಯಿಂದ ಮಧ್ಯಾಹ್ನವೇ ಮನೆಗೆ ಮರಳಿದ್ದ ಆರೋಪಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಅಲ್ಲದೆ, ತಾಯಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ.

ರಾತ್ರಿ ವಿಪರೀತ ಜ್ವರ ಕಾಣಿಸಿಕೊಂಡಿದ್ದರಿಂದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ್ದ ವೈದ್ಯರು, ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಹೇಳಿದ್ದರು. ಆನಂತರ ತಾಯಿ ವಿಚಾರಿಸಿದಾಗ ಮಲತಂದೆಯ ಕೃತ್ಯವನ್ನು ಸಂತ್ರಸ್ತೆ ವಿವರಿಸಿದ್ದಳು.

ತಾಯಿ ಕೊಟ್ಟ ದೂರಿನ ಅನ್ವಯ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮರುದಿನವೇ ಆರೋಪಿಯನ್ನು ಬಂಧಿಸಿದರು. ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry