ಶಾಸಕರಿಗೆ ಅವಹೇಳನ; ಜೆಡಿಎಸ್ ಪ್ರತಿಭಟನೆ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542

ಶಾಸಕರಿಗೆ ಅವಹೇಳನ; ಜೆಡಿಎಸ್ ಪ್ರತಿಭಟನೆ

Published:
Updated:

ಕುಣಿಗಲ್: ಶಾಸಕ ಡಿ.ನಾಗರಾಜಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮುಖಂಡರು ಅವಹೇಳನ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಇಲ್ಲಿ ಪ್ರತಿಭಟನೆ ನಡೆಸಿದರು. ಅರೋಪಿಗಳನ್ನು ಬಂದಿಸುವಂತೆ ಸಿಪಿಐ ಬಾಳೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎನ್.ಜಗದೀಶ್ ಮಾತನಾಡಿ, ‘ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್ ಕುಮ್ಮಕಿನಿಂದ ಬಿಜೆಪಿ ಕಾರ್ಯಕರ್ತರು ಶಾಸಕರ ತೇಜೋವಧೆ ಮಾಡುತ್ತಿದ್ದಾರೆ. ಬಿಜೆಪಿ ಬೆಂಬಲಿತ ಎಪಿಎಂಸಿ ನಿರ್ದೇಶಕ ರಾಜಣ್ಣ ಅವರ ಪುತ್ರ ಹೇಮಂತ್ ಸಾಮಾಜಿಕ ಜಾಲತಾಣಗಳಲ್ಲಿ ನಾಗರಾಜಯ್ಯ ಅವರ ಬಗ್ಗೆ ಅಸಹ್ಯ ಪದಗಳನ್ನು ಬಳಸಿದ್ದಾರೆ’ ಎಂದು ದೂರಿದರು.

ಸಿಪಿಐ ಬಾಳೇಗೌಡ, ‘ಈಗಾಗಲೇ ಪ್ರಕರಣ ದಾಖಲಾಗಿದೆ. ಒಬ್ಬ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಉಳಿದವರನ್ನು ಶೀಘ್ರದಲ್ಲಿ ಬಂಧಿಸಲಾಗುವುದು’ ಎಂದು ಭರವಸೆ ನೀಡಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಲ್.ಹರೀಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹರೀಶ್ ನಾಯಕ್, ಪುರಸಭೆ ಸದಸ್ಯ ಅನ್ಸರ್ ಪಾಷಾ, ಮಾಜಿ ಉಪಾಧ್ಯಕ್ಷ ಅಬ್ದುಲ್ ಹಮೀದ್, ಬೆನವಾರ ಶೇಷಣ್ಣ ಇದ್ದರು

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry