ಜೆಡಿಎಸ್ ಅಧಿಕಾರಕ್ಕೆ ಬಂದರೆ ಕ್ಷೇತ್ರದಲ್ಲಿ ಉತ್ತಮ ಕೆಲಸ: ಎಚ್.ಜಿ.ವೆಂಕಟೇಶ್

ಮಂಗಳವಾರ, ಜೂನ್ 25, 2019
30 °C

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕ್ಷೇತ್ರದಲ್ಲಿ ಉತ್ತಮ ಕೆಲಸ: ಎಚ್.ಜಿ.ವೆಂಕಟೇಶ್

Published:
Updated:
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕ್ಷೇತ್ರದಲ್ಲಿ ಉತ್ತಮ ಕೆಲಸ: ಎಚ್.ಜಿ.ವೆಂಕಟೇಶ್

ಶೃಂಗೇರಿ: ರಾಜ್ಯದ ಜನರ ಒಲವು ಜೆಡಿಎಸ್ ಪಕ್ಷದ ಕಡೆ ವಾಲುತ್ತಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜನಪರ ಕಾಳಜಿ ಸರ್ವರಿಗೂ ಮಾದರಿಯಾಗಿದ್ದು, ಹಾಗಾಗಿ ಅವರು ಮುಂದಿನ ಮುಖ್ಯಮಂತ್ರಿ ಆಗುವ ಎಲ್ಲಾ ಮುನ್ಸೂಚನೆಗಳು ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಉಸ್ತುವಾರಿ ಮುಖ್ಯಸ್ಥ ಎಚ್.ಜಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ಶೃಂಗೇರಿ ತಾಲ್ಲೂಕಿನ ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ತಾಲ್ಲೂಕು ಜೆಡಿಎಸ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಮಂತ್ರಿ ಮಲೆನಾಡು ಗಾಂಧಿ ಗೋವಿಂದೇಗೌಡರ ಕಾರ್ಯ ವೈಖ್ಯರಿಯನ್ನು ಮೆಚ್ಚಿ ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಂಬಳಕೆರೆ, ಶೀರ್ಲು ಹಾಗೂ ಎಲ್ಸಾರ್ ಗ್ರಾಮದ ಸುಮಾರು 60ಕ್ಕೂ ಹೆಚ್ಚು ಮಂದಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಜೆಡಿಎಸ್ ಕ್ಷೇತ್ರಾಧ್ಯಕ್ಷ ದಿವಾಕರ್ ಭಟ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಗಂಡಘಟ್ಟ ಮಂಜುನಾಥ್, ಜೆಡಿಎಸ್ ಮುಖಂಡರಾದ ಹೆಗ್ಗದ್ದೆ ಶಿವಾನಂದ ರಾವ್,,ಸಂಜಯ್,ಆಶೋಕ್,ರಹಮತ್ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry