ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರೂರಿನಲ್ಲಿ ಆಯುರ್ವೇದ ಕಾಲೇಜು ಕಾರ್ಯಾರಂಭ

ಹೈಕೋರ್ಟ್‌ ಮಹತ್ವದ ತೀರ್ಪು
Last Updated 12 ಅಕ್ಟೋಬರ್ 2017, 9:18 IST
ಅಕ್ಷರ ಗಾತ್ರ

ಹುಬ್ಬಳ್ಳಿ: ತಾಲ್ಲೂಕಿನ ವರೂರಿನಲ್ಲಿರುವ ಎ.ಜಿ.ಎಂ. ಆಯುರ್ವೇದ ಕಾಲೇಜು ಕಾರ್ಯಾರಂಭ ಮಾಡಿದ್ದು, 2017–18ನೇ ಸಾಲಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ವರೂರು ನವಗ್ರಹ ತೀರ್ಥ ಕ್ಷೇತ್ರದ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹೇಳಿದರು.

‘ಎ.ಜಿ.ಎಂ. ಆಯುರ್ವೇದ ಆಸ್ಪತ್ರೆಯಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಕಾಲೇಜು ಪ್ರಾರಂಭಿಸುವ ಮೂಲಕ, ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ವೈದ್ಯರಾಗುವ ಅವಕಾಶವನ್ನು ಸಂಸ್ಥೆ ಕಲ್ಪಿಸಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ರಾಜೀವಗಾಂಧಿ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಮತ್ತು ಕೇಂದ್ರ ಸರ್ಕಾರದ ಆಯುಷ್ ವಿಭಾಗದಿಂದ ಅನುಮೋದನೆ ಪಡೆಯಲಾಗಿದೆ. ಸದ್ಯ ಶೇ 25ರಷ್ಟು ಸೀಟುಗಳು ಮಾತ್ರ ಖಾಲಿ ಉಳಿದಿವೆ. ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ’ ಎಂದು ಹೇಳಿದರು.

ಕಾಲೇಜು ಪ್ರಾಚಾರ್ಯ ಎಂ.ಸಿ. ಪಾಟೀಲ, ಎಂಜಿನಿಯರಿಂಗ್‌ ಕಾಲೇಜು ಪ್ರಾಚಾರ್ಯ ಡಿ. ಸುನೀಲಕುಮಾರ, ಪ್ರೊ. ಸಂದೀಪ ಕ್ಯಾತನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT