ಶುಕ್ರವಾರ, ಸೆಪ್ಟೆಂಬರ್ 20, 2019
28 °C

ಸಮಾನ ವೇತನ ನೀಡಲು ಒತ್ತಾಯ

Published:
Updated:

ಕಲಬುರ್ಗಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಾಯಿಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರು ಕರ್ನಾಟಕ ದಲಿತ ಸರ್ವೋದಯ ಸಮಿತಿ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ಮಾಡಿದರು.

ಬಸ್ ನಿಲ್ದಾಣದ ಆವರಣದಲ್ಲಿ 20 ವರ್ಷಗಳಿಂದ ಸ್ವಚ್ಛತಾ ಕೆಲಸ ಮಾಡುತ್ತಿದ್ದೇವೆ. ಆದರೆ ಸಮಾನ ವೇತನ ಹಾಗೂ ಭವಿಷ್ಯನಿಧಿ, ಇಎಸ್‌ಐ ಸೌಲಭ್ಯ ನೀಡುತ್ತಿಲ್ಲ. ಆದ್ದರಿಂದ ಕಾರ್ಮಿಕ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘದ ಉತ್ತರ ಕರ್ನಾಟಕ ಅಧ್ಯಕ್ಷ ವಿ.ಎಚ್.ವಾಲೀಕಾರ, ಪ್ರಧಾನ ಕಾರ್ಯದರ್ಶಿ ಹುಸೇನ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Post Comments (+)