ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂಡಿಕೆದಾರರ ಸಂಪತ್ತು ವೃದ್ಧಿ

Last Updated 12 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಗುರುವಾರ ಸಕಾರಾತ್ಮಕ ವಹಿವಾಟು ನಡೆಯಿತು. ಇದರಿಂದ ಮಾರುಕಟ್ಟೆ ಮೌಲ್ಯದಲ್ಲಿ ಹೂಡಿಕೆದಾರರ ಸಂಪತ್ತು ₹1.46 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ. ಮಾರುಕಟ್ಟೆಯ ಒಟ್ಟು ಬಂಡವಾಳ ಮೌಲ್ಯ ₹ 136 ಲಕ್ಷ ಕೋಟಿಗಳಿಗೆ ತಲುಪಿದೆ.

ಆಗಸ್ಟ್ ತಿಂಗಳ ಕೈಗಾರಿಕಾ ಪ್ರಗತಿ ಸೂಚ್ಯಂಕ (ಐಐಪಿ) ಉತ್ತಮವಾಗಿರಲಿದೆ ಎಂದು ಹೂಡಿಕೆದಾರರು ನಿರೀಕ್ಷೆ ಮಾಡಿದ್ದರು. ಇದರಿಂದ ಖರೀದಿಗೆ ಹೆಚ್ಚು ಆಸಕ್ತಿ ತೋರಿದರು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 348 ಅಂಶಗಳಷ್ಟು ಗರಿಷ್ಠ ಜಿಗಿತ ಕಂಡು, 32,182 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 111 ಅಂಶ ಹೆಚ್ಚಾಗಿ 10,096 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಮೇ 25 ರ ನಂತರ (149 ಅಂಶ) ಸೂಚ್ಯಂಕದ ಗರಿಷ್ಠ ಏರಿಕೆ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT