ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ

ಮಂಗಳವಾರ, ಮೇ 21, 2019
32 °C

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ

Published:
Updated:

ನಾಗಮಂಗಲ (ಮಂಡ್ಯ): ಬೆಳ್ಳೂರು ಹೋಬಳಿಯ ಗಂಗಾಧರನಗರದ ಬುದ್ಧಿಮಾಂದ್ಯ ಬಾಲಕಿಯನ್ನು ಗುರುವಾರ ಕರೆದೊಯ್ದ ಯುವಕರಿಬ್ಬರು ತುರುವೇಕೆರೆ ತಾಲ್ಲೂಕಿನ ಡಣಾಯಕನಪುರದ ಬೆಟ್ಟದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಆರೋಪಿಗಳಾದ ಮಂಜ, ಕುಮಾರ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಲಕಿ ಗ್ರಾಮದ ಸನಿಹದಲ್ಲಿದ್ದ ಅಯ್ಯನಕಟ್ಟೆಯಲ್ಲಿ ಬಟ್ಟೆ ಒಗೆಯಲು ಹೋದಾಗ ಆರೋಪಿಗಳು, ಆಕೆಯ ಮುಖಕ್ಕೆ ಬಟ್ಟೆ ಕಟ್ಟಿ ಬೆಟ್ಟಕ್ಕೆ ಕರೆದೊಯ್ದಿದ್ದಾರೆ. ಬಾಲಕಿಯನ್ನು ಬೈಕ್‌ನಲ್ಲಿ ಕರೆದೊಯ್ಯುತ್ತಿರುವುದನ್ನು ಕಂಡ ಸ್ಥಳೀಯರು ಬೆಟ್ಟದ ಬಳಿ ಹೋಗಿ ಹುಡುಕಿದ್ದಾರೆ. ಬಾಲಕಿಯನ್ನು ರಕ್ಷಿಸಿದ ಜನರು ಆರೋಪಿಗಳನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry