ಜಿಎಸ್‌ಟಿ ವ್ಯಾಪ್ತಿಗೆ ರಿಯಲ್‌ ಎಸ್ಟೇಟ್‌

ಭಾನುವಾರ, ಜೂನ್ 16, 2019
30 °C

ಜಿಎಸ್‌ಟಿ ವ್ಯಾಪ್ತಿಗೆ ರಿಯಲ್‌ ಎಸ್ಟೇಟ್‌

Published:
Updated:
ಜಿಎಸ್‌ಟಿ ವ್ಯಾಪ್ತಿಗೆ ರಿಯಲ್‌ ಎಸ್ಟೇಟ್‌

ವಾಷಿಂಗ್ಟನ್‌: ‘ರಿಯಲ್‌ ಎಸ್ಟೇಟ್‌ ವಹಿವಾಟನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಬಗ್ಗೆ ಮುಂದಿನ ತಿಂಗಳು ನಡೆಯಲಿರುವ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ.

‘ಗುವಾಹಟಿಯಲ್ಲಿ ನವೆಂಬರ್ 9ರಂದು ನಡೆಯಲಿರುವ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ವಿಷಯವನ್ನು ವಿಸ್ತೃತವಾಗಿ ಚರ್ಚಿಸಲಾಗುವುದು. ಗರಿಷ್ಠ ಪ್ರಮಾಣದಲ್ಲಿ ತೆರಿಗೆ ತಪ್ಪಿಸುವ  ಮತ್ತು ಅಪಾರ ಪ್ರಮಾಣದಲ್ಲಿ ನಗದು ವಹಿವಾಟು ನಡೆಯುವ  ರಿಯಲ್ ಎಸ್ಟೇಟ್‌ ವಲಯವು ಈಗಲೂ  ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗೆ ಇದೆ.

‘ಕೆಲ ರಾಜ್ಯ ಸರ್ಕಾರಗಳು ಈ ವಹಿವಾಟನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಒಲವು ತೋರಿಸಿವೆ. ಇನ್ನೂ ಕೆಲ ರಾಜ್ಯಗಳು ವಿರೋಧಿಸಿವೆ. ಈ ಬಗೆಯ ಭಿನ್ನಾಭಿಪ್ರಾಯವನ್ನು ಚರ್ಚೆ ಮೂಲಕ ಬಗೆಹರಿಸಿ ಒಂದು ಅಂತಿಮ ನಿರ್ಧಾರಕ್ಕೆ ಬರಲು ಪ್ರಯತ್ನಿಸಲಾಗುವುದು. ಈ ವಹಿವಾಟನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಸಮರ್ಥನೀಯ ಕಾರಣಗಳಿವೆ ಎಂದು ನಾನು ಬಲವಾಗಿ ನಂಬಿರುವೆ.

‘ಸದ್ಯಕ್ಕೆ ಕಟ್ಟಡ, ಸಂಕೀರ್ಣ ನಿರ್ಮಾಣ, ಕಟ್ಟಡಗಳ ಪೂರ್ಣ ಅಥವಾ ಭಾಗಶಃ ಮಾರಾಟದ ಮೇಲೆ ಶೇ 12ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಆದರೆ, ಭೂಮಿ ಮತ್ತು ಇತರ ಸ್ಥಿರಾಸ್ತಿಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗೆ ಇಡಲಾಗಿದೆ’ ಎಂದರು.

ಹಾರ್ವರ್ಡ್‌ ವಿಶ್ವವಿದ್ಯಾನಿಲಯದಲ್ಲಿ ನಡೆದ ವಾರ್ಷಿಕ ಮಹೀಂದ್ರಾ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಭಾರತದಲ್ಲಿನ ತೆರಿಗೆ ಸುಧಾರಣೆ ವಿಷಯದ ಬಗ್ಗೆ ಮಾತನಾಡುತ್ತಿದ್ದರು.

ಒಂದು ವಾರದ ಅಮೆರಿಕ ಭೇಟಿಯಲ್ಲಿ ಇರುವ ಜೇಟ್ಲಿ ಅವರು, ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಮತ್ತು ವಿಶ್ವಬ್ಯಾಂಕ್‌ನ ವಾರ್ಷಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry