ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.4ರಿಂದ ಕನಕ ಪಂಚಮಿ ಉತ್ಸವ

Last Updated 12 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: 530ನೇ ಕನಕ ಜಯಂತಿ ಅಂಗವಾಗಿ ಜಗದ್ಗುರು ರೇವಣಸಿದ್ದೇಶ್ವರ ವಿದ್ಯಾಪೀಠದಿಂದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನ.4ರಿಂದ 8ರವರೆಗೆ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಠದ ಬಸವರಾಜ ಸ್ವಾಮೀಜಿ, ಉತ್ಸವದಲ್ಲಿ ಕನಕದಾಸರ ಬದುಕು, ಬರಹದ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಕನಕ ಪ್ರಶಸ್ತಿ ನೀಡಲಾಗುತ್ತದೆ ಎಂದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ಈಶ್ವರಪ್ಪ, ಸಚಿವರಾದ ಎಚ್.ಕೆ. ಪಾಟೀಲ, ಎಚ್.ಎಂ.ರೇವಣ್ಣ, ಮಠಾಧೀಶರು, ಶಾಸಕರು ಹಾಗೂ ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT