ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಗಳಲ್ಲಿ ಕಟ್ಟೆಚ್ಚರಕ್ಕೆ ಕೇಂದ್ರ ಸೂಚನೆ

Last Updated 12 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ರೋಹಿಂಗ್ಯಾ ನಿರಾಶ್ರಿತರು ಭಾರತ ಪ್ರವೇಶಿಸದಂತೆ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ ಗಡಿಗಳಲ್ಲಿ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಭಾರತ–ಬಾಂಗ್ಲಾದೇಶ ಗಡಿಯ 4,096 ಕಿ.ಮೀ ಪ್ರದೇಶದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧರು ಮತ್ತು ಭಾರತ–ಮ್ಯಾನ್ಮಾರ್‌ ಗಡಿಯ 1,643 ಕಿ.ಮೀ ಪ್ರದೇಶದಲ್ಲಿ ಅಸ್ಸಾಂ ರೈಫಲ್ಸ್‌ ಯೋಧರನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.

ರೋಹಿಂಗ್ಯಾ ನಿರಾಶ್ರಿತರು ಅಕ್ರಮ ವಲಸಿಗರಾಗಿದ್ದು, ಐಎಸ್‌ ಜತೆ ಸಂಪರ್ಕ ಹೊಂದಿರುವ ಸಾಧ್ಯತೆಗಳಿವೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದ ಬಳಿಕ ಈ ನಿರ್ಧಾರ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT