ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮವಾಗಿ ನೆಲೆಸಿರುವ ವಿದೇಶಿಯರನ್ನು ಹೊರ ಹಾಕಿ: ಆದಿತ್ಯನಾಥ್

Last Updated 12 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಲಖನೌ : ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರನ್ನು ಪತ್ತೆ ಹಚ್ಚಲು ಸಮೀಕ್ಷೆ ನಡೆಸುವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಕ್ರಮವಾಗಿ ನೆಲೆಸಿರುವ ವಿದೇಶಿಯರನ್ನು ಪತ್ತೆ ಹಚ್ಚಿ ರಾಜ್ಯದಿಂದ ಹೊರ ಹಾಕಲಾಗುವುದು. ಅಲ್ಲದೆ ರಾಜ್ಯದ ಗಡಿಭಾಗಗಳಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ಚಟುವಟಿಕೆಗಳನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದು,

ದೀಪಾವಳಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದೆ ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT